spot_img
Thursday, April 16, 2026
spot_img

ʼಇಂಡಿಯಾʼ ಮೈತ್ರಿಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್‌ ಖರ್ಗೆ ಆಯ್ಕೆ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ಸುದೀರ್ಘ ಸಮಾಲೋಚನೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷಗಳ ʼಇಂಡಿಯಾʼ ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಆದರೇ, ಈ ಬಗ್ಗೆ ʼಇಂಡಿಯಾʼ ಮೈತ್ರಿಕೂಟವು ಅಧಿಕೃತ ಘೋಷಣೆ ಮಾಡಬೇಕಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೈತ್ರಿಕೂಟ ಮುನ್ನಡೆಸುವ ಹೊಣೆಗಾರಿಕೆ ವಹಿಸಿಕೊಳ್ಳುವ ಬಯಕೆಯಲ್ಲಿದ್ದರು. ಆದರೆ ಇಂದಿನ (ಶನಿವಾರ) ಸಭೆಯಲ್ಲಿ ಅವರು ಕಾಂಗ್ರೆಸ್‌ನ ಯಾರಾದರೂ ಜವಾಬ್ದಾರಿ ವಹಿಸಿಕೊಳ್ಳಲಿ ಎಂದಿದ್ದಾರೆ.

ʼಇಂಡಿಯಾʼ ಮೈತ್ರಿಕೂಟ ಎದುರಿಸುತ್ತಿರುವ ಹಲವು ಸವಾಲುಗಳಲ್ಲಿ, ಅಧ್ಯಕ್ಷರ ಆಯ್ಕೆಯು ಕೂಡ ಒಂದಾಗಿತ್ತು. ಆದರೆ ಅತ್ಯಂತ ದೊಡ್ಡ ಸವಾಲಾಗಿರುವ ಪಕ್ಷಗಳ ನಡುವೆ ಸೀಟು ಹಂಚಿಕೆ ಸಮಸ್ಯೆಯನ್ನು ಬಗೆಹರಿಸುವುದು ಇನ್ನೂ ಬಾಕಿ ಇದೆ.

ಸೀಟು ಹಂಚಿಕೆ ಕಾರ್ಯ ಸೂಚಿ ಪರಾಮರ್ಶೆ, ಭಾರತ್ ಜೋಡೋ ನ್ಯಾಯ ಯಾತ್ರೆ ಮತ್ತು ಮೈತ್ರಿಕೂಟಕ್ಕೆ ಸಂಬಂಧಿಸಿದ ಇತರೆ ವಿಚಾರಗಳ ಬಗ್ಗೆ ಚರ್ಚಿಸಲು ʼಇಂಡಿಯಾʼ ಮೈತ್ರಿಕೂಟದ ನಾಯಕರು ಆನ್‌ಲೈನ್ ಸಭೆ ನಡೆಸಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮೈತ್ರಿಕೂಟದ ಸಂಚಾಲಕರ ಹುದ್ದೆಗೆ ಹೆಸರಿಸಲಾಗಿದೆ. ಆದರೆ ಅವರು ಯಾವುದೇ ಹುದ್ದೆಯನ್ನು ಬಯಸಿಲ್ಲ ಎಂದು ಜೆಡಿಯು ಹೇಳಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಜತೆ ಚರ್ಚಿಸಿದ ನಂತರ ಸಂಚಾಲಕರ ಹುದ್ದೆಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಡೆದ ಮೈತ್ರಿಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ಖರ್ಗೆ ಅವರನ್ನು ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘೋಷಿಸಬೇಕು ಎಂದು ಹೇಳಿದ್ದರು. ಮಮತಾ ಅಭಿಪ್ರಾಯಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲ ವ್ಯಕ್ತಪಡಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!