spot_img
Tuesday, April 14, 2026
spot_img

ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡ್‌ನಲ್ಲೇ ಮೊದಲು ಜಾರಿ ! : ರಾಜನಾಥ್‌ ಸಿಂಗ್‌ ಹೇಳಿದ್ದೇನು  ?

ಜನಪ್ರತಿನಿಧಿ ವಾರ್ತೆ (ಲಕ್ನೋ) :  ಏಕರೂಪ ನಾಗರಿಕ ಸಂಹಿತೆಯನ್ನು ಮೊದಲು ಉತ್ತರಾಖಂಡ್ ನಲ್ಲಿ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿ 2022ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯ ಪ್ರಮುಖ ಭಾಗವಾಗಿತ್ತು. ಉತ್ತರಾಖಂಡ ಮೂಲದ ಮಂದಿ ಆಯೋಜಿಸಿದ್ದ “ಉತ್ತರಾಯಣಿ ಕೌತಿಕ್” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, “ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿ ಯಾವುದಾದರೂ ರಾಜ್ಯ ಮೊದಲ ಸ್ಥಾನದಲ್ಲಿದ್ದರೆ ಅದು ಉತ್ತರಾಖಂಡ ಆಗಿರುತ್ತದೆ” ಎಂದು ಹೇಳಿದರು.

ಉತ್ತರಾಖಂಡವು ಕೇವಲ ದೇವರುಗಳು ಮತ್ತು ವೀರರ ನಾಡು ಮಾತ್ರವಲ್ಲದೆ ಈಗ ಅಭಿವೃದ್ಧಿಯ ನಾಡು ಎಂದು ಗುರುತಿಸಲ್ಪಟ್ಟಿದೆ ಎಂದು ಹೇಳಿದರು.

ಕಳೆದ 5 ವರ್ಷಗಳಲ್ಲಿ ರಾಜ್ಯ ಗಮನಾರ್ಹ ಪ್ರಗತಿ ಸಾಧಿಸಿದೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ನಡುವಿನ ಸಂಬಂಧವನ್ನು ಉಲ್ಲೇಖಿಸಿದ ಅವರು, “ಉತ್ತರಾಖಂಡವನ್ನು ಉತ್ತರ ಪ್ರದೇಶದಿಂದ ಬೇರ್ಪಡಿಸಿದ ನಂತರ, ಎರಡು ರಾಜ್ಯಗಳ ನಡುವಿನ ಸಂಬಂಧದಲ್ಲಿ ಸ್ವಲ್ಪ ಸಮಯದವರೆಗೆ ಕಹಿ ಇದ್ದಿತ್ತು. ಆದರೆ ಇದು ಜನರಲ್ಲಿ ಎಂದಿಗೂ ಕಂಡುಬಂದಿಲ್ಲ.” ತೆಲಂಗಾಣವನ್ನು ಆಂಧ್ರಪ್ರದೇಶದಿಂದ ಬೇರ್ಪಡಿಸಿ 10 ವರ್ಷಗಳಾದರೂ ಎರಡು ರಾಜ್ಯಗಳ ನಡುವೆ ಹಲವು ಸಮಸ್ಯೆಗಳು ಬಗೆಹರಿಯದೇ ಹಾಗೆಯೇ ಉಳಿದಿವೆ ಆದರೆ ಉತ್ತರ ಪ್ರದೇಶ ವಿಭಜನೆಯ ನಂತರ ಅಂತಹ ಸಮಸ್ಯೆಗಳು ಆಗಲಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಇನ್ನು, ಎರಡನೇ ಅವಧಿಗೆ ಅಧಿಕಾರ ಹಿಡಿದ ನಂತರ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಯುಸಿಸಿಯ ಕರಡು ರಚಿಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯನ್ನು ಸ್ಥಾಪಿಸಲು ಒಪ್ಪಿಗೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!