spot_img
Wednesday, January 22, 2025
spot_img

ಯಾರೇ ಆಗಲಿ, ಕಾನೂನು ಕೈಗೆ ತೆಗೆದುಕೊಂಡರೆ ಶಿಕ್ಷೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಹಾವೇರಿ) : ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ ನಡೆದಾಗ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ.  ಸಂತ್ರಸ್ತೆಯನ್ನು ಭೇಟಿ ಮಾಡಿ ಸಾಂತ್ವನ ಹೇಳುವುದು ಒಂದು ಭಾಗವಾದರೆ, ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ. ಎರಡನ್ನೂ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇನ್ನು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು. ರೈತರರಿಗೆ ಪರಿಹಾರ ನೀಡಿಲ್ಲವೆಂದು  ಪ್ರತಿಭಟನೆ ಮಾಡುತ್ತಿದ್ದಾರೆ. ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ನಡಿ ಬರ ಪರಿಹಾರ ಬಂದ ನಂತರ ಪುನಃ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾತ್ರವಲ್ಲದೇ, ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಹುದ್ದೆಯಲ್ಲಿರುವ ವ್ಯಕ್ತಿಗೆ ಏಕವಚನದಲ್ಲಿ ಮಾತನಾಡುವುದನ್ನು ಸಮರ್ಥಿಸಿಕೊಂಡಿದ್ದಾರೆ. ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ  ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯ ತ್ವ ಇರಬೇಕು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!