Sunday, September 8, 2024

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ, ಪೊಲೀಸರು ರಾಜ್ಯ ಕಾಂಗ್ರೆಸ್ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ದುರ್ದೈವ : ವಿಜಯೇಂದ್ರ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಆದರೆ ಸರ್ಕಾರ ಇದನ್ನು ಹಗುರವಾಗಿ ಪರಿಗಣಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಇಂದು(ಸೋಮವಾರ) ವರದಿಗಾರರೊಂದಿಗೆ ಮಾತನಾಡಿ, ಹಾವೇರಿ ಮಹಿಳೆ ಮೇಲೆ ಅತ್ಯಾಚಾರ ಸಂಬಂಧ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ನಾನು ಈ ವಿಷಯದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆಗಳು ಆಗುತ್ತಿವೆ. ಬೆಳಗಾವಿ, ಹಾವೇರಿಯ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಜನವರಿ 7ರಂದು ಈ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ತಲೆ ಕೆಡಿಸಿಕೊಂಡಿಲ್ಲ. ಎಫ್‍ಐಆರ್ ಕೂಡ ದಾಖಲಿಸಿಲ್ಲ. ಮತ್ತೊಂದು ಕಡೆ ಈ ದುರ್ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ಆಗುತ್ತಿದೆ. ಇದು ಬೇಸರದ ಮತ್ತು ಖಂಡನೀಯ ವಿಚಾರ ಎಂದು ಅವರು ದುಃಖ ವ್ಯಕ್ತ ಪಡಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದು ಗಂಭೀರವಾದ ವಿಚಾರ. ಆದರೆ, ರಾಜ್ಯ ಸರಕಾರ ಇದನ್ನು ಹಗುರವಾಗಿ ಪರಿಗಣಿಸಿದೆ. ಪೊಲೀಸರು ರಾಜ್ಯ ಕಾಂಗ್ರೆಸ್ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ದುರ್ದೈವ. ಬಿಜೆಪಿಯ ಹಿರಿಯರು ಅಲ್ಲಿಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತುಕೊಂಡು ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಲು ಕೋರಿದ್ದೇವೆ. ರಾಜ್ಯ ಸರಕಾರವು ಇದನ್ನು ಮುಚ್ಚಿ ಹಾಕಬಾರದು ಎಂದು ಒತ್ತಾಯಿಸಿದರು. ರಾಜ್ಯ ಸರಕಾರ ಮತ್ತು ಸಚಿವರು ಉಡಾಫೆ ಮಾತನಾಡುತ್ತಾರೆ. ಇದು ಹೆಣ್ಣಿನ ಮಾನದ, ಗೌರವದ ಪ್ರಶ್ನೆ ಎಂದು ಅವರು ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಇನ್ನು,  2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!