Sunday, September 8, 2024

ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ರನ್ನು ಕೊಲ್ಲುವುದಾಗಿ ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) :  ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಕೊಲ್ಲುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಇಂದು (ಮಂಗಳವಾರ) ಬೆದರಿಕೆ ಹಾಕಿದ್ದಾರೆ. ಜನವರಿ 26 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿಯ ಮೇಲೆ ದಾಳಿ ನಡೆಸಲು ಪನ್ನುನ್ ಯೋಜಿಸಿದ್ದಾರೆ ಎಂದು ಪಂಜಾಬ್‌ನ ಉನ್ನತ ಪೊಲೀಸ್ ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮಾಹಿತಿ ನೀಡಿವೆ.

ಗ್ಯಾಂಗ್​ಸ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಡಿಜಿಪಿ ಗೌರವ್ ಯಾದವ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಡಿಜಿಪಿ ಗೌರವ್ ಯಾದವ್, ರಾಜ್ಯ ಪೊಲೀಸ್ ಪಡೆ ದರೋಡೆಕೋರರ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಸಿಖ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಮತ್ತು ಭಯೋತ್ಪಾದಕ ಪನ್ನುನ್, ಈ ಹಿಂದೆ ಭಾರತೀಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ಅನೇಕ ಬೆದರಿಕೆಗಳನ್ನು ಹಾಕಿದ್ದ. ಖಲಿಸ್ತಾನಿ ಉಗ್ರ ಗುರು ಪತ್ವಂತ್ ಸಿಂಗ್ ಪನ್ನುನ್, ವಿಡಿಯೋ ರಿಲೀಸ್ ಮಾಡುವ ಮೂಲಕ, ಡಿಸೆಂಬರ್ 13ರಂದು ಭಾರತದ ಸಂಸತ್ ಭವನದ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಿದ್ದ.

ಅದಕ್ಕೂ ಮೊದಲು, ಖಲಿಸ್ತಾನಿ ಭಯೋತ್ಪಾದಕನ ಮತ್ತೊಂದು ವೀಡಿಯೋ ಕಾಣಿಸಿಕೊಂಡಿತ್ತು, ಅದರಲ್ಲಿ ಅವರು ನವೆಂಬರ್ 19 ರಂದು ʼಏರ್ ಇಂಡಿಯಾʼ ವಿಮಾನದ ಮೂಲಕ ಪ್ರಯಾಣ ಬೆಳೆಸುವವರ “ಜೀವಕ್ಕೆ ಅಪಾಯವಿದೆ” ಎಂದು ಬೆದರಿಕೆ ಹಾಕಿದ್ದ. ಏರ್ ಇಂಡಿಯಾ ಬೆದರಿಕೆ ವಿಡಿಯೋ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಈಗ ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಈ ಬರುವ ಗಣರಾಜ್ಯೋತ್ಸವದಂದು ಕೊಲ್ಲುವುದಾಗಿ ಬೆದರಿಕೆ ಹಾಕಿರುವುದಾಗಿ ವರದಿ ಆಗಿದೆ.

ಇನ್ನು, ಕಳೆದ ಜೂನ್‌ನಲ್ಲಿ ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಮತ್ತೊಬ್ಬ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಇದೀಗ ಅಮೆರಿಕದಲ್ಲಿ ಪನ್ನು ಹತ್ಯೆಯ ಸಂಚು ವಿಫಲವಾಗಿರುವುದಾಗಿ ವರದಿಯಾಗಿದೆ. ನಿಜ್ಜರ್ ಹತ್ಯೆಯ ನಂತರ ಅಲ್ಲಿನ ಅಂದರೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಆರೋಪಿಸಿದ್ದರು.

ರಾಮ ಮಂದಿರ ಶಂಕು ಸ್ಥಾಪನೆ ಕುರಿತು ಪನ್ನು ಹೇಳಿಕೆ ನೀಡಿದ್ದ ಒಂದು ವಾರದ ಬಳಿಕ ಹೇಳಿಕೆ ಬಂದಿದೆ. ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು ಅತ್ಯಂತ ಅಪವಿತ್ರ, ಭಕ್ತಿಹೀನ, ಅನ್ಯಾಯದ ಸಮಾರಂಭವಾಗಿದೆ ಎಂದು ಹೇಳಿದ್ದ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!