spot_img
Saturday, May 23, 2026
spot_img

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದ ಸಿಎಂ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದರು.

ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು.

ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್  ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!