spot_img
Monday, April 6, 2026
spot_img

ಅಯೋಧ್ಯೆಯ ರಾಮ ಮಂದಿರ ಲೋಕಾರ್ಪಣೆ ಮೋದಿ, ಆರ್‌ಎಸ್‌ಎಸ್‌ ಕಾರ್ಯಕ್ರಮ : ರಾಹುಲ್‌ ಟೀಕೆ   

ಜನಪ್ರತಿನಿಧಿ ವಾರ್ತೆ (ಮಣಿಪುರ) :  ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಇರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಲೋಕಾರ್ಪಣಾ ಸಮಾರಂಭ ಮೋದಿಯವರ ಕಾರ್ಯಕ್ರಮ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಗಾಂಧಿ, “ಆರ್‌ಎಸ್‌ಎಸ್ ಮತ್ತು ಬಿಜೆಪಿ ಜನವರಿ 22 ರ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಜಕೀಯ ಮತ್ತು ನರೇಂದ್ರ ಮೋದಿ ಕಾರ್ಯವನ್ನಾಗಿ ಮಾಡಿದೆ. ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮವಾಗಿದೆ. ಅದಕ್ಕಾಗಿಯೇ ಕಾಂಗ್ರೆಸ್ ಅಧ್ಯಕ್ಷರು ನಾನು ಕಾರ್ಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಪ್ರಧಾನ ಮಂತ್ರಿ ಹಾಗೂ ಆರ್‌ ಎಸ್‌ಎಸ್‌ ನನ್ನು ಕೇಂದ್ರವಾಗಿಟ್ಟು ಆಯೋಜಿಸುತ್ತಿರುವ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಕಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಮೈತ್ರಿಕೂಟದ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿದ ಗಾಂಧಿ, ‘ಇಂಡಿಯಾ ಮೈತ್ರಿಕೂಟದಲ್ಲಿರುವ ಸಣ್ಣ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ನಾವು ಒಟ್ಟಾಗಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ನನಗೆ ವಿಶ್ವಾಸವಿದೆ. ಸೀಟು ಹಂಚಿಕೆಯ ವಿಷಯವನ್ನು ಇಂಡಿಯಾ ಮೈತ್ರಿಯ ಮಿತ್ರಪಕ್ಷಗಳೊಂದಿಗೆ ಚರ್ಚಿಸಲಾಗುತ್ತಿದೆ. ಈ ಮಾತುಕತೆಗಳು ಸಾಕಷ್ಟು ಸಕಾರಾತ್ಮಕವಾಗಿ ನಡೆಯುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿಕೂಟ ಒಟ್ಟಾಗಿ ಗೆಲುವು ಸಾಧಿಸಲಿದೆ’ ಎಂದು ಹೇಳಿದ್ದಾರೆ.

ಜನವರಿ 14 ರಂದು ಮಣಿಪುರದ ತೌಬಲ್‌ನಿಂದ ಆರಂಭವಾದ ಯಾತ್ರೆ ಸೋಮವಾರ ಸಂಜೆ ನಾಗಾಲ್ಯಾಂಡ್ ತಲುಪಿತು. ಪಾದಯಾತ್ರೆಯು 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳ ಮೂಲಕ ಹಾದು ಹೋಗಲಿದ್ದು, 6,713 ಕಿ.ಮೀ.ಗಳನ್ನು ಕ್ರಮಿಸಲಿದೆ. ಈ ಯಾತ್ರೆಯು ಹೆಚ್ಚಾಗಿ ಬಸ್‌ಗಳ ಮೂಲಕ ಸಾಗಲಿದ್ದು, ಕಾಲ್ನಡಿಗೆಯಲ್ಲಿಯೂ ನಡೆಯಲಿದೆ. ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಜನವರಿ 22 ರ ದೇವಾಲಯದ ಲೋಕಾರ್ಪಣೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಾರೆ, ಬಿಜೆಪಿ ಇದನ್ನು ಚುನಾವಣಾ ಲಾಭಕಗ್ಕಾಗಿ ಮಾಡಲಾಗುತ್ತಿದೆ. ಇದೊಂದು “ರಾಜಕೀಯ ಯೋಜನೆ”ಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಏತನ್ಮಧ್ಯೆ, ಪಕ್ಷದ ಉತ್ತರ ಪ್ರದೇಶ ಘಟಕವು ಮಕರ ಸಂಕ್ರಾಂತಿಯಂದು ಅಯೋಧ್ಯೆಗೆ ಭೇಟಿ ನೀಡಿ ಪ್ರಾರ್ಥನೆ ಪ್ರಾರ್ಥನೆ ಸಲ್ಲಿಸಿದ್ದರು. ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಮತ್ತು ಇತರ ಪಕ್ಷದ ನಾಯಕರು ಜನವರಿ 15 ರಂದು ಅಯೋಧ್ಯೆಯ ಸತಯೂ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರು.ರಾಜಕೀಯ ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!