spot_img
Monday, April 6, 2026
spot_img

ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ ವಿಫಲವಾಗಿದೆ ಎಂದರ್ಥ, ಹೀಗೆ ಮುಂದುವರಿದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ : ಸಿದ್ದರಾಮಯ್ಯ ಎಚ್ಚರಿಕೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು.

ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು.ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವಿಫಲರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಇದನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡಬೇಕು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!