spot_img
Monday, April 6, 2026
spot_img

ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

ಕುಂದಾಪುರ: ಯಡಾಡಿ ಮತ್ಯಾಡಿಯಲ್ಲಿರುವ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಸಂಪೂರ್ಣ ಆಡಳಿತವನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಆಡಳಿತದಲ್ಲಿ ಕಾರ್ಯನಿರ್ವಹಿಸುತ್ತಿದೆ. ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ನಿರ್ಮಾಣದ ಯೋಜನೆಯಲ್ಲಿದ್ದು ಈ ಶುಭ ಕಾರ್ಯಕ್ರಮವನ್ನು ದಿನಾಂಕ 18.01.2024 ರ ಗುರುವಾರದಂದು ಸಂಜೆ 5 ಗಂಟೆಗೆ ನೆರವೇರಲಿದೆ. ಭೂಮಿ ಪೂಜೆ ಮತ್ತು ಶಿಲಾನ್ಯಾಸವನ್ನು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳರವ ಅನುಗ್ರಹ ಪೂರ್ವಕವಾಗಿ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ನೆರವೇರಿಸಲಿದ್ದಾರೆ.

ಎಲ್. ಕೆ. ಜಿ ಇಂದ ಹತ್ತನೇ ತರಗತಿಯವರೆಗೆ ಇವತ್ತಿನ ಕಾಲಮಾನಕ್ಕೆ ಸರಿಹೊಂದುವ ಉತ್ತಮ ಶಿಕ್ಷಣವನ್ನು ನೀಡುವುದರೊಂದಿಗೆ ಆರನೇ ತರಗತಿಯಿಂದಲೇ ಐ. ಐ. ಟಿ ಫೌಂಡೇಶನ್ ತರಬೇತಿಯನ್ನು ಪ್ರತಿ ಶನಿವಾರ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನ, ಕರಾಟೆ, ಕೀಬೋರ್ಡ್, ತಬಲಾ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ಚಿತ್ರಕಲೆ ಇವುಗಳ ತರಗತಿಗಳನ್ನು ನಡೆಸುತ್ತಿದೆ. ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಸಿದ್ಧಗೊಳಿಸುವ ಕಾರ್ಯವು ಭರದಿಂದ ಸಾಗುತ್ತಿದೆ ಎಂದು ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!