spot_img
Monday, April 6, 2026
spot_img

ಸಕ್ಕರೆ ಕಾರ್ಖಾನೆ ಗುಜರಿ ವ್ಯವಹಾರ | 15-16 ಕೋಟಿ ಹಣ ಮಾರ್ಕೊಂಡು ತಿಂದಿದ್ದಾರೆ : ಲಕ್ಷ್ಮೀ ಹೆಬ್ಬಾಳ್ಕರ್‌

ಪರಶುರಾಮ ಥೀಂ ಪಾರ್ಕ್‌, ಸಕ್ಕರೆ ಕಾರ್ಖಾನೆ ಹಗರಣದಲ್ಲಿ ಪಾಲ್ಗೊಂಡವರಿಗೆ ಶೀಘ್ರ ಕ್ರಮ : ಹೆಬ್ಬಾಳ್ಕರ್‌

ಜನಪ್ರತಿನಿಧಿ ವಾರ್ತೆ (ಕುಂದಾಪುರ) :  ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ಹಗರಣ ಆಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಾರ್ಖಾನೆಯ ಗುಜರಿಯನ್ನು ಮಾರಾಟ ಮಾಡಿ 15-16 ಕೋಟಿ ಹಣವನ್ನು ಮಾರಿಕೊಂಡು ತಿಂದಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆಯಾದರೂ, ಮುಂದೇ ಆ ಬಗ್ಗೆ ಪ್ರಸ್ತಾಪವೇ ಇಲ್ಲ ಎಂಬ ಜನಪ್ರತಿನಿಧಿ ಪತ್ರಿಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೊಳಪಡಿಸುತ್ತೇವೆ ಎಂದು ಹೇಳಿದ್ದಾರೆ. ತಪ್ಪಿತಸ್ಥರಿಗೆ ಯಾವುದೇ ಮುಲಾಜಿಲ್ಲದೇ ಶಿಕ್ಷೆ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನು, ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್‌ ಬೆಟ್ಟದ ಮೇಲೆ ನಿರ್ಮಾಣ ಮಾಡಲಾದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿ ಸ್ಥಾಪಿಸಿ ಅಲ್ಲಿನ ಶಾಸಕ ಸುನೀಲ್‌ ಕುಮಾರ್‌ ಬಾರಿ ಅವ್ಯವಹಾರ ಮಾಡಿದ್ದಾರೆ ಎಂಬ ಆರೋಪ, ಕಾಂಗ್ರೆಸ್‌ ಮತ್ತು ಬಿಜೆಪಿ ಒಳ ರಾಜಕೀಯ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್‌, ಪ್ರವಾಸೋದ್ಯಮ ಇಲಾಖೆಗೆ ಒಳಪಡುವ ಪರಶುರಾಮ ಥೀಂ ಪಾರ್ಕ್‌ ಬಗ್ಗೆ ಸಮಗ್ರ ತನಿಖೆ ಆಗಲೇ ಬೇಕು. ಈಗಾಗಲೇ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಗೆ ತನಿಖೆ ಮಾಡುವಂತೆ ಆದೇಶಿಸಿದ್ದಾರೆ. ಅವ್ಯವಹಾರದಲ್ಲಿ ಪಾಲ್ಗೊಂಡವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಈಗಾಲೇ ಪ್ರವಾಸೋದ್ಯಮ ಸಚಿವರಾದ ಎಚ್‌. ಕೆ ಪಾಟೀಲ್‌ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಯಾವ ವಿಚಾರದಲ್ಲಿಯೂ ಒಳ ರಾಜಕೀಯದ ಮಾತೇ ಇಲ್ಲ. ಬೆಳಗಾವಿಯಿಂದ ಬಂದು ಇಲ್ಲಿ ಒಳ ರಾಜಕೀಯ ಮಾಡಬೇಕು ಎನ್ನುವಂತಹ ಯಾವುದೇ ಕಷ್ಟ ನನಗೆ ಇಲ್ಲ ಎಂದೂ ಅವರು ಪ್ರತಿಕ್ರಿಯಿಸಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ  ಗುಜರಿ ವ್ಯವಹಾರ ಹಾಗೂ ಕಾರ್ಕಳದ ಪರಶುರಾಮ ಥೀಂ ಪಾರ್ಕ್‌ ನಲ್ಲಿ ನಡೆಯಲಾಗಿದೆ ಎಂಬ ಭ್ರಷ್ಟಾಚಾರದ ಬಗ್ಗೆ ಜನಪ್ರತಿನಿಧಿ ಪತ್ರಿಕೆ ಸಮಗ್ರ ತನಿಖಾ ವರದಿಯನ್ನು ಪ್ರಕಟಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!