spot_img
Monday, April 6, 2026
spot_img

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಜನರ ಸಮಸ್ಯೆಗೆ ಪರಿಹಾರ ನೀಡಿ : ಅಧಿಕಾರಿಗಳಿಗೆ ಹೆಬ್ಬಾಳ್ಕರ್‌ ಸೂಚನೆ

ಜನಪ್ರತಿನಿಧಿ (ಕುಂದಾಪುರ) : ಬಾಕಿ ಉಳಿದಿರುವ ಹಕ್ಕುಪತ್ರಗಳ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು(ಬುಧವಾರ) ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕುಂದಾಪುರ ತಾಲೂಕಿನಲ್ಲಿ ಸುಮಾರು ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಮುಂದಿನ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೂ ಮುನ್ನ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪಕ್ಷಾತೀತವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೆ ಹಕ್ಕು ಪತ್ರಗಳ  ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು. ಜನಪ್ರತಿನಿಧಿಗಳಿಗೆ ಅಧಿಕಾರ ಮುಖ್ಯ ಅಲ್ಲ, ಬಡವರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

 ಉಡುಪಿ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಭಾಗ್ಯ  : ಹೆಬ್ಬಾಳ್ಕರ್‌

ಉಡುಪಿ ಜಿಲ್ಲೆ ತನ್ನದೇ ವೈಶಿಷ್ಟ್ಯಗಳನ್ನು ಹೊಂದಿದೆ. ಇಂಥ ಜಿಲ್ಲೆಗೆ ಉಸ್ತುವಾರಿ ಸಚಿವೆ ಆಗಿರುವುದು ನನ್ನ ಭಾಗ್ಯ ಎಂದರು.   

ಸಮಾರಂಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಕುಂದಾಪುರ ತಾಲೂಕಿನ ತಹಶೀಲ್ದಾರ್‌ ಶೋಭಾಲಕ್ಷ್ಮೀ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!