Sunday, September 8, 2024

ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ? ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ ಒಡೆದು ಆಳುವ ನೀತಿಯಿಂದ ಮಾತ್ರ. ಬ್ರಿಟಿಷರ ವಿರುದ್ದ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರಿಗೆ ಮೋಸದಿಂದ ಹಿಡಿದು ಕೊಟ್ಟವರು ಕೂಡ ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟಿಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ. ಶರಣಶ್ರೇಷ್ಠ ಬಸವಣ್ಣನವರು, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಕೂಡ ಜಾತಿ ತಾರತಮ್ಯ ಇಲ್ಲದ ಮನುಷ್ಯ ಪ್ರೇಮವನ್ನು ಸಾರಿದರು.

ರೈತರು, ಶಿಕ್ಷಕರು, ಸೈನಿಕರು ಈ ದೇಶವನ್ನು ಒಳಗಿನಿಂದ ಮತ್ತು ಹೊರಗಿನಿಂದ ಕಾಯುತ್ತಿರುವ ಸೈನಿಕರು. ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕ ಇದ್ದ ಹಾಗೆ. ರೈತರ ಏಳಿಗೆಗಾಗಿ ಹಸಿರು ಕ್ರಾಂತಿಯನ್ನು ಈ ದೇಶದಲ್ಲಿ ನಡೆಸಿದ್ದು ಕಾಂಗ್ರೆಸ್ ಪಕ್ಷ.  ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15. ಇದೇ ದಿನ ದೇಶಕ್ಕೆ ಸ್ವಾತಂತ್ರ್ಯ ಬಂತು. ರಾಯಣ್ಣ ಹುತಾತ್ಮ ಆಗಿದ್ದು ಜನವರಿ 26. ಇದು ಗಣರಾಜ್ಯೋತ್ಸವ ದಿನ ಎಂಬುದು ಕಾಕತಾಳೀಯ ಎಂದು ಅವರು ಹೇಳಿದರು.

ಮನುಷ್ಯ ದ್ವೇಷ ಹರಡಿ, ಮಸೀದಿ ದ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ. ಸಂಗೊಳ್ಳಿರಾಯಣ್ಣನ ದೇಶಭಕ್ತಿ ಮತ್ತು ಹೋರಾಟದ ಛಲ ಹಾಗೂ ತ್ಯಾಗವನ್ನು ಶಾಶ್ವತಗೊಳಿಸುವ ಕಾರಣದಿಂದ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾಯಿತು. ಇದರಿಂದ ಇಡೀ ಕ್ಷೇತ್ರ ಹಲವು ದಿಕ್ಕುಗಳಿಂದ ಅಭಿವೃದ್ಧಿ ನಡೆಯುತ್ತಿದೆ. ಇಲ್ಲಿನ ಸೈನಿಕ ಶಾಲೆಗೆ ಶಂಕುಸ್ಥಾಪನೆ ನಾನೇ ನೆರವೇರಿಸಿದ್ದೆ. ಈಗ 250 ಮಕ್ಕಳು ಅಚ್ಚುಕಟ್ಟಾಗಿ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟರು.

ಶಾಸಕರಾದ ಮಹಂತೇಶ್ ಕೌಜಲಗಿ ಸಜ್ಜನ ಮತ್ತು ಮನುಷ್ಯ ಪ್ರೇಮದ ರಾಜಕಾರಣಿ. ಇಂಥವರು ಹೆಚ್ಚೆಚ್ಚು ರಾಜಕಾರಣಕ್ಕೆ ಬರಬೇಕು. ಮನುಷ್ಯ ದ್ವೇಷಿಗಳು ರಾಜಕಾರಣಕ್ಕೆ ಬರಬಾರದು. ಕೌಜಲಗಿ ಪ್ರತಿನಿಧಿಸುವ ಕ್ಷೇತ್ರ ಮತ್ತು ಸಂಗೊಳ್ಳಿಯ ಇಡೀ ಕ್ಷೇತ್ರ ಅಭಿವೃದ್ಧಿಗೆ ಅಗತ್ಯವಾದಷ್ಟು ಅನುದಾನವನ್ನು ನೀಡಲಾಗುವುದು.  ರಾಜ್ಯದಲ್ಲಿ ಕನ್ನಡಿಗರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಹೇಳಿದ್ದರು. ಐದಕ್ಕೆ ಐದೂ ಗ್ಯಾರಂಟಿಯನ್ನು ಸರ್ಕಾರ ಬಂದು 7 ತಿಂಗಳಲ್ಲೇ ಜಾರಿ ಆಗಿದೆ. ರಾಜ್ಯ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿದೆ ಎಂದು ಅವರು ಹೇಳಿದರು.  

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!