spot_img
Monday, April 6, 2026
spot_img

ಗಂಗೊಳ್ಳಿ : ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ 8ನೇ ಪುಣ್ಯತಿಥಿ

ಗಂಗೊಳ್ಳಿ : ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ 8ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ನಡೆಯಿತು.

ಬೆಳಿಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಪುಷ್ಪಾರ್ಚನೆ, ತೀರ್ಥ ಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ತಾಂತ್ರಿಕ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಸ್ಥಾನದ ಮೊಕ್ತೇಸರ ಜಿ.ನರಸಿಂಹ ನಾಯಕ್ ಅವರು ಶ್ರೀಗಳ ಗುರು ಗುಣಗಾನ ಮಾಡಿದರು. ರಾತ್ರಿ ಭಜನೆ, ಶ್ರೀದೇವರಿಗೆ ಪ್ರಸನ್ನಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್, ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರಾದ ಜಿ.ಅನಂತಕೃಷ್ಣ ಭಟ್, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!