spot_img
Monday, April 6, 2026
spot_img

ಕೊನೆಗೂ ಸರ್ಕಾರಿ ಬಂಗಲೆ  ಖಾಲಿ ಮಾಡಿದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಕಳೆದ ಡಿಸೆಂಬರ್ ನಲ್ಲಿ ಸಂಸತ್ತಿನಿಂದ ಉಚ್ಛಾಟನೆಗೊಂಡಿದ್ದ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಇಂದು(ಶುಕ್ರವಾರ) ನವದೆಹಲಿಯ 9 ಬಿ, ಟೆಲಿಗ್ರಾಫ್ ಲೇನ್‌ನಲ್ಲಿರುವ ಸರ್ಕಾರಿ ಮನೆಯನ್ನು ಖಾಲಿ ಮಾಡಿದ್ದಾರೆ ಎಂದು ಅವರ ವಕೀಲರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ವರದಿಗಾರರಿಗೆ ಮಾಹಿತಿ ನೀಡಿದ ಮೊಯಿತ್ರಾ ಅವರ ವಕೀಲ ಶಾದನ್ ಫರಾಸತ್, ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಎಸ್ಟೇಟ್ ನಿರ್ದೇಶನಾಲಯವು ಬೆಳಗ್ಗೆ ಮೆಹುವಾ ಅವರ ಅಧಿಕೃತ ಬಂಗಲೆಯನ್ನು ಖಾಲಿ ಮಾಡಲು ತಂಡವೊಂದನ್ನು ಕಳುಹಿಸಿತ್ತು ಹಾಗೂ ಅದರ ಸುತ್ತಲಿನ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ಅಧಿಕಾರಿಗಳು ಬರುವ ಮೊದಲೇ ಇಂದು ಬೆಳಿಗ್ಗೆ 10 ಗಂಟೆಗೆ ಖಾಲಿ ಮಾಡಲಾಗಿದ್ದು, ಮನೆಯ ಕೀಯನ್ನು ಡಿಒಇ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಲೋಕಸಭೆಯಿಂದ ಹೊರಹಾಕಲ್ಪಟ್ಟ ಮೊಯಿತ್ರಾಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಈ ವಾರದ ಆರಂಭದಲ್ಲಿ ಡಿಒಇ (ಎಸ್ಟೇಟ್ ನಿರ್ದೇಶನಾಲಯ)  ನೋಟಿಸ್ ಜಾರಿ ಮಾಡಿತ್ತು. ಸರ್ಕಾರಿ ಬಂಗಲೆ ತೆರವು ಮಾಡುವ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ಒತ್ತಾಯಿಸಿ ಮಹುವಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿತು. 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!