spot_img
Monday, April 6, 2026
spot_img

ಬಿಲ್ಕಿಸ್‌ ಬಾನು ಪ್ರಕರಣ : ಶರಣಾಗತಿಗೆ ಹೆಚ್ಚುವರಿ ಸಮಯ ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು(ಶುಕ್ರವಾರ) ವಜಾಗೊಳಿಸಿದೆ. ನ್ಯಾಯಾಲಯವು ನಿಗದಿಪಡಿಸಿದ ಮೂಲ ಗಡುವಿನ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಶರಣಾಗಲು ಸಮಯ ವಿಸ್ತರಣೆ ಕೋರಿ ಅಪರಾಧಿಗಳು ಉಲ್ಲೇಖಿಸಿರುವ ಕಾರಣಗಳು ಯಾವುದೇ ಮಾನದಂಡವನ್ನು ಹೊಂದಿಲ್ಲ. ಯಾವುದೇ ಸೂಕ್ತ ಕಾರಣಗಳು ಇಲ್ಲ ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂ ಕೋರ್ಟ್ನ ನ್ಯಾಯ ಪೀಠ ಹೇಳಿರುದಾಗಿ ಸುದ್ದಿ ಸಂಸ್ಥೆ ಲೈವ್ ಲಾ ವರದಿ ಮಾಡಿದೆ.

ಬಿಲ್ಕಿಸ್ ಬಾನು ಪ್ರಕರಣ ಏನು ?

2002ರ ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರನ್ನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 11 ಅಪರಾಧಿಗಳನ್ನು ಶೀಘ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಗುಜರಾತ್ ಸರ್ಕಾರದ ಆದೇಶವನ್ನು ಜನವರಿ 8 ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಗುಜರಾತ್ ಸರ್ಕಾರವು ಔಟ್‌ಡೇಟೆಡ್‌ ರೀಮಿಷನ್‌ ಪಾಲಿಸಿ ಪ್ರಕಾರ ಆಗಸ್ಟ್ 14, 2023 ರಂದು ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಬಿಲ್ಕಿಸ್ ಬಾನು ಸೇರಿದಂತೆ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

2002ರಲ್ಲಿ ಗೋಧ್ರಾ ರೈಲು ದುರಂತದ ಘಟನೆಯ ನಂತರ ಗುಜರಾತ್‌ನಲ್ಲಿ ನಡೆದ ಗಲಭೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವಾಗ ಬಿಲ್ಕಿಸ್ ಬಾನು 11 ಜನರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಆಗ ಬಿಲ್ಕಿಸ್‌ ಬಾನುಗೆ 21 ವರ್ಷವಾಗಿತ್ತು ಮಾತ್ರವಲ್ಲದೇ ಐದು ತಿಂಗಳ ಗರ್ಭಿಣಿಯಾಗಿದ್ದಳು. ಆಕೆಯ ಮೂರು ವರ್ಷದ ಮಗು, ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರು ಅಮಾನುಷವಾಗಿ ಹತ್ಯೇಗೀಡಾದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!