Sunday, September 8, 2024

ಅಯೋಗ್ಯ ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು…. : ಕಾಂಗ್ರೆಸ್‌ ಹೇಳಿದ್ದೇನು ?

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಅಯೋಗ್ಯ ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ರಾಜ್ಯ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ನಿನ್ನ ರಾಯಚೂರಿನಲ್ಲಿ ನಡೆದ ʼನಮೋ ಭಾರತʼ ಕಾರ್ಯಕ್ರಮನ್ನು ಉದ್ದೇಶಿಸಿ ಕಲ್ಬುರ್ಗಿಯ ESI ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಖರ್ಗೆ ಕುಟುಂಬದ ವಿರುದ್ಧವೂ ವಾಗ್ದಾಳಿ ನಡೆಸಿದ್ದ ಬಲಪಂಥೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ, “ಖರ್ಗೆ ಸಾಹೇಬರ ಕಾಲದಲ್ಲಿ ESI ಆಸ್ಪತ್ರೆ ನಿರ್ಮಾಣ‌ ಮಾಡಲಾಯಿತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದ್ರೆ ಈ ಚಿತ್ರ ಕಾಣ್ತದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತ. ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ” ಎಂದು ಜರಿದಿದ್ದರು.

ಸೂಲಿಬೆಲೆಯವರ ಈ ಹೇಳಿಕೆಯ ವಿರುದ್ಧ ಹರಿಹಾಯ್ದ ಆಡಳಿತರೂಢ ಕಾಂಗ್ರೆಸ್‌, ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಟೀಕಿಸಿದೆ.

ತನ್ನದೇ ಸರ್ಕಾರದ ಗೃಹ ಸಚಿವನ್ನು ಮನವಿ ಮಾಡಿಕೊಂಡ ಕಾಂಗ್ರೆಸ್‌, ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!