spot_img
Monday, April 6, 2026
spot_img

ಮರಳು ದಂಧೆಗೆ ನೆರವು : ಕಂಕನಾಡಿಯ ಪೊಲೀಸ್‌ ಇನ್ಸ್‌ಪೆಕ್ಟರ್ ಅಮಾನತು !

ಜನಪ್ರತಿನಿಧಿ ವಾರ್ತೆ (ಮಂಗಳೂರು) : ಅಕ್ರಮ ಮರಳು ದಂಧೆಗೆ ನೆರವು ನೀಡಿರುವ ಆರೋಪದ ಮೇಲೆ ನಗರದ ಕಂಕನಾಡಿ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ.

ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕೈಗೊಳ್ಳಲು ಮೇಲಾಧಿಕಾರಿಗಳ ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಎಸಿಪಿ ಧನ್ಯ ನಾಯಕ್‌ ವರದಿ ನೀಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಇನ್‌ಸ್ಪೆಕ್ಟರ್‌ ಎಚ್‌ಎಸ್‌ ಭಜಂತ್ರಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೆಪ್ಪಿನಮೊಗರು ಕಡೆಕಾರು ಎನ್ನುವಲ್ಲಿ ಅಕ್ರಮ ಮರಳು ಮಾಫಿಯಾ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸುವಂತೆ ಉನ್ನತ ಅಧಿಕಾರಿಗಳ ಸೂಚನೆಯನ್ನು ಭಜಂತ್ರಿ ನಿರ್ಲಕ್ಷಿಸಿದ್ದಾರೆ ಎಂದು ವರದಿಯಾಗಿತ್ತು. ದೂರುಗಳೊಂದಿಗೆ ಠಾಣೆಗೆ ಭೇಟಿ ನೀಡುವ ಜನರೊಂದಿಗೆ ಇನ್ಸ್‌ಪೆಕ್ಟರ್ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!