Thursday, November 21, 2024

ಲೋಕಸಭಾ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್‌ ಬಗ್ಗೆ ಅಸಮಾಧಾನ ! ಇದೇ ಅಂತಿಮವಲ್ಲ ಎಂದು ಸಮರ್ಥಿಸಿಕೊಂಡ ಸಿಎಂ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಲೋಕಸಭಾ ಚುನಾವಣೆ ನಿಹವಾಗುತ್ತಿದ್ದಂತೆ ರಾಜ್ಯದ ಆಡಳಿತರೂಢ ಕಾಂಗ್ರೆಸ್‌ ಸರ್ಕಾರ ಎಚ್ಚೆತ್ತುಕೊಂಡಿದ್ದು, ಚುನಾವಣಾ ರಾಜತಂತ್ರಗಾರಿಕೆಗೆ ಮುಂದಾಗಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪ್ರದೇಶ ಚುನಾವಣಾ ಸಮಿತಿ (ಪಿಇಸಿ) ಸಭೆ ನಡೆಸಿ ಚರ್ಚಿಸಿದೆ.

ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ಸೇರಿದಂತೆ ಕೆಲವು ಪಿಇಸಿ ಸದಸ್ಯರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಬಗ್ಗೆ  ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಮಾಹಿತಿ ನೀಡಿವೆ, ಆದರೆ ಇದು ಅಂತಿಮ ಪಟ್ಟಿಯಲ್ಲ, ಹಾಗೂ  ಗೆಲ್ಲುವ ಅಭ್ಯರ್ಥಿಗಳನ್ನು ಅಂತಿಮವಾಗಿ  ಪಕ್ಷದ ಹೈಕಮಾಂಡ್ ಸೈಂಟಿಫಿಕ್‌ ಆಗಿ ಯೋಚಿಸಿ ಸಮೀಕ್ಷೆಯೊಂದಿಗೆ ಆಯ್ಕೆ ಮಾಡಲಿದೆ ಎಂದು ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ/

ಸಭೆ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ” ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿ ಪಡೆದುಕೊಳ್ಳಲಾಗಿದೆ. ಇದರಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು 3 ದಿನಗೊಳಗೆ ನೀಡಬೇಕೆಂದು ಸೂಚಿಸಿದ್ದೇವೆ. ರಾಜ್ಯ ಘಟಕದ ನೇತೃತ್ವದಲ್ಲಿ ಕ್ಷೇತ್ರವಾರು ಸಮೀಕ್ಷೆ ಮಾಡಿ ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಗೆ ಅಂತಿಮ ಹಂತದ ಹೆಸರನ್ನು ಶಿಫಾರಸು ಮಾಡುತ್ತೇವೆ,” ಎಂದು ಅವರು ಮಾಹತಿ ನೀಡಲಾಗಿದೆ. ಈ ಹಿಂದೆ ಲೋಕಸಭೆ ಕ್ಷೇತ್ರಗಳ ಉಸ್ತುವಾರಿ ಸಚಿವರು ಸಿದ್ದಪಡಿಸಿದ್ದ ಪಟ್ಟಿ ತಮಗೆ ಸಮಾಧಾನ ತಂದಿಲ್ಲ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದರು. 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಮೊದಲ ಬಾರಿಗೆ ಪಟ್ಟಿಯನ್ನು ನೋಡಿದ್ದೇನೆ ಮತ್ತು ಇದು ಅಂತಿಮವಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಆಕಾಂಕ್ಷಿಗಳಿದ್ದಾರೆ.  ಇವರುಗಳಲ್ಲಿ ಗೆಲ್ಲಬಹುದಾದ ಅಭ್ಯರ್ಥಿಗಳ ಹೆಸರನ್ನು ಟಿಕ್ ಮಾಡಲು PEC ಸದಸ್ಯರಿಗೆ ತಸೂಚಿಸಲಾಗಿದೆ. ಜನವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕು ಹಾಗೂ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ನೀಡಬೇಕು ಎಂದು ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಎಐಸಿಸಿ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ ಹೈಕಮಾಂಡ್‌ಗೆ ಸಲಹೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!