spot_img
Monday, April 6, 2026
spot_img

ಗಂಗೊಳ್ಳಿಯ ವಿವಿಧೆಡೆ ಶ್ರೀರಾಮ ಮಂದಿರ ಲೋಕಾರ್ಪಣೆ ಸಂಭ್ರಮ


ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ವತಿಯಿಂದ ಶ್ರೀ ರಾಮರಕ್ಷಾ ಸ್ತೋತ್ರ ಪಠಣ, ಭಜನೆ, ಪೂಜೆ ಮೊದಲಾದ ಕಾರ್ಯಕ್ರಮಗಳು ಮತ್ತು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮಗಳನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.

ಗುಜ್ಜಾಡಿ-ನಾಯಕವಾಡಿಯ ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ದೀಪ ಸ್ಥಾಪನೆಯೊಂದಿಗೆ ಸಾಮೂಹಿಕ ಭಜನೆ, ಧಾರ್ಮಿಕ ಉಪನ್ಯಾಸ, ರಾಮಜಪ, ಮಧ್ಯಾಹ್ನ ಅನ್ನ ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಂದಿರದಲ್ಲಿ ಅಳವಡಿಸಲಾಗಿದ್ದ ಬೃಹತ್ ಎಲ್‌ಇಡಿ ಪರದೆಯಲ್ಲಿ ಅಯೋಧ್ಯೆಯ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

ಹೊಸಾಡು ಗ್ರಾಮದ ಕಂಚುಗೋಡು ಶ್ರೀ ರಾಮ ದೇವಸ್ಥಾನದಲ್ಲಿ ಶ್ರೀರಾಮ ತಾರಕ ಯಜ್ಞ, ಭಜನೆ, ಸ್ತ್ರೋತ್ರ ಪಠಣ, ಮಧ್ಯಾಹ್ನ ಅನ್ನಸಂತರ್ಪಣೆ ಮೊದಲಾದ ಕಾರ್ಯಕ್ರಮಗಳು ಸಂಪನ್ನಗೊಂಡಿತು.

ಗಂಗೊಳ್ಳಿಯ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಭಜನಾ ಕಾರ್ಯಕ್ರಮ, ಸ್ತೋತ್ರ ಪಠಣ, ಮಧ್ಯಾಹ್ನ ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಗಂಗೊಳ್ಳಿಯ ದಾಕುಹಿತ್ಲು ಶ್ರೀ ರಾಮ ಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೀಪ ಸ್ಥಾಪನಪೂರ್ವಕ ಭಜನಾ ಕಾರ್ಯಕ್ರಮ, ಸ್ತೋತ್ರ ಪಠಣ, ಮಧ್ಯಾಹ್ನ ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಗಂಗೊಳ್ಳಿಯ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಿಮಿತ್ತ ರಾಮ ನಾಮ ಜಪ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಿಮಿತ್ತ ಭಜನೆ, ಮಹಾಮಂಗಳಾರತಿ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಕೃಷ್ಣ ಜಿ.ಟಿ., ಸುರೇಶ ಜಿ., ಸುಮಿತ್ರಾ, ನರಸಿಂಹ ಕೆ., ಸುಂದರ ಬಿ., ಶ್ರೀಕಾಂತ ಎನ್. ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!