spot_img
Monday, April 6, 2026
spot_img

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ ಆಯ್ಕೆ

ಹೆಮ್ಮಾಡಿ: ಮೊಗವೀರ ಯುವ ಸಂಘಟನೆ (ರಿ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇದರ 2024-2026ನೇ ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಕಾಂಚನ್ ಬಾಳಿಕೆರೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜಗದೀಶ ನೆಂಪು, ಕೋಶಾಧಿಕಾರಿಯಾಗಿ ವಿಜಯ ಕಾಂಚನ್ ನಾಡ ಆಯ್ಕೆಯಾಗಿದ್ದಾರೆ.

ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಜನವರಿ 20ರಂದು ನಡೆದ 2022-24ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಹೆಮ್ಮಾಡಿ ಘಟಕದ ಹಾಲಿ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಘಟಕದ ಕಾರ್ಯಕ್ರಮಗಳಿಗೆ ಸಹಕರಿಸಿದ ಸರ್ವರಿಗೂ ಕೃತಜ್ಣತೆ ಸಲ್ಲಿಸಿ ಮುಂದಿನ ಅವಧಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಶುಭ ಕೋರಿದರು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡಕ ಮಾತನಾಡಿ, ಹೆಮ್ಮಾಡಿ ಘಟಕದ ಕಾರ್ಯ ಚಟುವಟಿಕೆಗಳ ಬಗ್ಗೆ ಹೆಮ್ಮೆ ವ್ಯಕ್ತ ಪಡಿಸಿದರು.

ಘಟಕದ ಮಾಜಿ ಅಧ್ಯಕ್ಷರಾದ ವಾಸು ಜಿ. ನಾಯ್ಕ್, ಮೊಗವೀರ ಸ್ತ್ರೀಶಕ್ತಿ ಬಗ್ವಾಡಿ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಚಂದನ್ ಉಪಸ್ಥಿತರಿದ್ದರು. ಘಟಕದ ಹಾಲಿ ಕಾರ್ಯದರ್ಶಿ ಪ್ರವೀಣ್ ಮೊಗವೀರ್ ಗಂಗೊಳ್ಳಿ ವಾರ್ಷಿಕ ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಹಾಲಿ ಕೋಶಾಧಿಕಾರಿ ದಿನೇಶ್ ಕಾಂಚನ್ ಬಾಳಿಕೆರೆ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ರಾಜೀವ ಶ್ರೀಯಾನ್ ಗುಜ್ಜಾಡಿ ಸ್ವಾಗತಿಸಿ, ಪ್ರಸ್ತಾವಿಕ ಮಾತುಗಳಾಡಿದರು. ಸ್ತ್ರೀ ಶಕ್ತಿ ಬಗ್ವಾಡಿ ಸಂಘಟನೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಆನಂದ ಮೊಗವೀರ ಪ್ರಾರ್ಥನೆಗೈದರು.

ಹೆಮ್ಮಾಡಿ ಘಟಕದ ಸದಸ್ಯರು ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಸಂಘಟನೆಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!