spot_img
Monday, April 6, 2026
spot_img

ರಾಮ ಮಂದಿರ ಲೋಕಾರ್ಪಣೆ ಬಳಿಕ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼಯನ್ನು ಘೋಷಿಸಿದ ಮೋದಿ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ ) : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹೊಸದೊಂದು ಯೋಜನೆಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ʼಎಕ್ಸ್‌ʼ ಮೈಕ್ರೋಬ್ಲಾಗಿಂಗ್‌ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡ ಮೋದಿ, ಅಯೋಧ್ಯೆಯಿಂದ ಹಿಂದಿರುಗಿದ ನಾನು ಮೊದಲು ತೆಗೆದುಕೊಂಡ ನಿರ್ಧಾರವೇ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼ. ಒಂದು ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಸೂರ್ಯವಂಶಸ್ಥ ಭಗವಾನ್‌ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪ್ರಪಂಚದಾದ್ಯಂತ ಪಡೆಯುತ್ತಾರೆ.  ನಿನ್ನೆ(ಸೋಮವಾರ) ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ ನನ್ನ ಸಂಕಲ್ಪ ಇನ್ನಷ್ಟು ಬಲಪೂರ್ಣಗೊಂಡಿದೆ ಎಂದು ಅವರು ಬರೆದುಕೊಂಡಿದ್ದಾರೆ.

ರಾಮ ಮಂದಿರ ಲೋಕಾರ್ಪೊಣೆಯ ನಂತರ ನಮ್ಮ ಸರ್ಕಾರವು ಒಂದು ಕೋಟಿ ಮನೆಗಳ ಮೇಲ್ಛಾವಣಿಗೆ ಸೋಲಾರ್‌ ಅಳವಡಿಸುವ ಗುರಿಯೊಂದಿಗೆ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼ ಅನ್ನು ಪ್ರಾರಂಭಿಸಲಿದೆ. ಈ ಯೋಜನೆಯು ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್‌ ಬಿಲ್‌ನನ್ನು ಕಡಿಮೆ ಮಾಡುವುದಲ್ಲದೇ, ಇಂಧನ ಕ್ಷೇತ್ರದಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದೂ ಅವರು ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!