Sunday, September 8, 2024

“21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಪ್ರಬಂಧ ಸ್ಪರ್ಧೆ ಏರ್ಪಡಿಸಲು ಸಚಿವ ಮಧುಬಂಗಾರಪ್ಪಗೆ ಸೂಚಿಸಿದ ಸಿದ್ದರಾಮಯ್ಯ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯಾಗಿ ಏಳುವರೆ ದಶಕಗಳು ಮುಗಿದವು ಗಾಂಧೀಜಿಯವರು ತಮ್ಮ ಜೀವಿತಾವಧಿ ಉದ್ದಕ್ಕೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದ್ದರು. ಅದೇ ಸಂದರ್ಭದಲ್ಲಿ ದೇಶದ ವೈವಿದ್ಯತೆ ಹಾಗೂ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಪ್ರತಿಪಾದಿಸಿದ್ದರು. ಇಂಥ ಮಹಾನ್‌ ವ್ಯಕ್ತಿಯನ್ನು ಕೆಲವು ದುರುಳರು ಪಿತೂರಿ ಮಾಡಿ ಹತ್ಯೆ ಮಾಡಿದರು ಎಂದು ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದಾರೆ. 

ಸಚಿವ ಮಧು ಬಂಗಾರಪ್ಪ ಅವರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ, ಗಾಂಧೀಜಿಯವರ ಹತ್ಯೆಯ ನಂತರವೂ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಇತ್ತೀಚೆಗೆ ದ್ವೇಷ-ಹಿಂಸೆಯನ್ನು ಪರತಿಪಾದಿಸುವ ವಿಕೇಂದ್ರೀಕರಣವನ್ನು ದಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ, ದೀನ ದಲಿತ, ಮಹಿಳೆ, ಆದಿವಾಇ, ರೈತ, ಕಾರ್ಮಿಕ ಹಾಗೂ ಯುವಜನರ  ಹಕ್ಕಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಗಾಂಧೀಜಿಯವರ ವಿರುದ್ಧ, ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ.

ಇಂದು ಜಾಗತಿಕ ಪರಿಸರದ ಬಿಕ್ಕಟ್ಟುಗಳು , ಆರ್ಟಿಫಿಶೀಯಲ್‌ ಇಂಟೆಲಿಜೆನ್ಸ್‌, ಹಿಂಸಾ ವಿನೋದ ಮುಂತಾದವುಗಳಿಂದ ಮನುಷ್ಯರು ಈ ಭೂಮಿಯ ಮೇಲಿಂದಲೇ ಅಳಿಸಿ ಹೋಗುವ ದುಸ್ಥಿತಿಗೆ ತಲುಪಿಯಾಗಿದೆ, ಎಂದು ಸ್ಟೀಫನ್‌ ಹಾಕಿಂಗ್‌ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ದೊಡ್ಡ ಭಾಷೆಗಳು ಸಣ್ಣ ಸಣ್ಣ ಭಾಷೆಗಳನ್ನುಕಳೆದುಕೊಳ್ಳುವುದೆಂದರೆ ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವುದು ಎಂದರ್ಥ ಎಂಬುವುದು ಈಗಾಗಲೇ ಸಾಬೀತಾದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!