Thursday, November 21, 2024

ರಾಮಲಲ್ಲನ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಸದಾ ನೆನಪಿನಲ್ಲಿ ಉಳಿಯುತ್ತದೆ : ಪ್ರಧಾನಿ ನರೇಂದ್ರ ಮೋದಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಅಯೋಧ್ಯೆಯಲ್ಲಿ ನಿನ್ನೆ(ಸೋಮವಾರ) ನಡೆದ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು(ಮಂಗಳವಾರ) ಹೇಳಿದ್ದಾರೆ.

ಅವರು ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ʼಎಕ್ಸ್ʼ  ಖಾತೆಯಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡು ಸಮಾರಂಭ ಸದಾ ನೆನಪಿನಲ್ಲಿ ಉಳಿಯಲಿದೆ ಎಂದು ಬರೆದುಕೊಂಡಿದ್ದಾರೆ.

ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ ಪ್ರಧಾನಿ ಮೋದಿಯವರು ಪವಿತ್ರ ಸಮಾರಂಭದಲ್ಲಿ ಪಾಲ್ಗೊಂಡು ಹೊಸ ರಾಮಲಲ್ಲಾನ ದರ್ಶನ ಪಡೆದು ಆಶೀರ್ವಾದ ತೆಗೆದುಕೊಳ್ಳುವ ದೃಶ್ಯ ವಿಡಿಯೋದಲ್ಲಿ ಗಮನಿಸಬಹುದಾಗಿದೆ. 

ಜನವರಿ 22 “ಕ್ಯಾಲೆಂಡರ್‌ನಲ್ಲಿ ದಿನಾಂಕವಲ್ಲ, ಇದು ನವ ಯುಗದ ಆರಂಭ. ಸಾವಿರಾರು ವರ್ಷಗಳ ನಂತರವೂ ಜನರು ಈ ದಿನಾಂಕ, ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ. ನಾವು ಇದನ್ನು ವೀಕ್ಷಿಸುತ್ತಿರುವುದು ರಾಮನ ಪರಮ ಆಶೀರ್ವಾದ. ಇವು ಶಾಶ್ವತವಾದ ನೆನಪುಗಳು ಎಂದು ನಿನ್ನೆ(ಸೋಮವಾರ) ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನಾ ವಿಧಿವಿಧಾನಗಳನ್ನು ಪೂರೈಸಿ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ  ಪ್ರಧಾನಿ ಹೇಳಿದ್ದರು. 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!