spot_img
Monday, April 6, 2026
spot_img

ಗಾಂಧೀಜಿ, ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಬೋಸ್ ಅವರ 127ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು(ಮಂಗಳವಾರ) ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಗಾಂಧೀಜಿ ಹಾಗೂ ಸುಭಾಷ್ ಚಂದ್ರ ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾತನಾಡಿದರು.

ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ ಮೂಲಕ ಸ್ವಾತಂತ್ರ್ಯ ಗಳಿಸಬೇಕು ಎಂದರೆ, ಸುಭಾಷ್ ಚಂದ್ರ ಬೋಸ್ ಅವರಿಗೆ ಅದರ ತದ್ವಿರುದ್ಧವಾದ ನಿಲುವು ಇತ್ತು. ಬೇರೆ ವಿಚಾರಗಳಲ್ಲಿ ಗಾಂಧೀಜಿಯವರ ಬಗ್ಗೆ ಅಪಾರವಾದ ಗೌರವವಿತ್ತು. ಈ ವಿಚಾರದಲ್ಲಿ ಮಾತ್ರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯ ಇತ್ತು ಎಂದು ಹೇಳಿದರು.

ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಅದರ ಮುಖ್ಯಸ್ಥರಾಗಿದ್ದರು. ಜಪಾನ್ ದೇಶದಲ್ಲಿ ಅವರು ವಿಮಾನ ದುರಂತದಲ್ಲಿ ಅವರು ಸಾವಿಗೀಡಾದರು. ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ನಮಗೆಲ್ಲಾ ಆದರ್ಶ. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!