spot_img
Monday, April 6, 2026
spot_img

ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ವಿಜೇತೆ ಗಾರ್ಗಿದೇವಿಗೆ ಸನ್ಮಾನ

ಕುಂದಾಪುರ: ಶಿಕ್ಷಣ ಮಂತ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿದೇವಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಾರ್ಗಿದೇವಿಯ ಪೋಷಕರಾದ ಅಶೋಕ್ ಸುವರ್ಣ ಮತ್ತು ನಾಟ್ಯಗುರು ವಿದುಷಿ ಶ್ರೀಮತಿ ಪ್ರವಿತಾ ಅಶೋಕ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದೊಂದು ಸುಪ್ತ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಮುನ್ನಡೆದರೆ ಯಶಸ್ಸು ಸಾಧ್ಯ ಎಂದರು.

ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಪ್ರತಿಭಾನ್ವಿತೆಯನ್ನು ಸನ್ಮಾನಿಸಿ ಮಾತನಾಡಿ ಸಂಸ್ಥೆಯ‌ ಎಲ್ಲಾ ವಿದ್ಯಾರ್ಥಿಗಳೂ ಪ್ರತಿಭಾ ಸಂಪನ್ನರಾಗುವಂತೆ ಆಶಿಸಿದರು. ಸಂಸ್ಥೆಯ‌ ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!