spot_img
Monday, April 6, 2026
spot_img

ಕುಂದಾಪುರ ವಿ.ಕೆ.ಆರ್. ಶಾಲೆಯ ಗಾರ್ಗಿದೇವಿ ಗಣರಾಜ್ಯೋತ್ಸವ ಪೆರೆಡ್‌ಗೆ ಆಯ್ಕೆ

ಕುಂದಾಪುರ : ಶಿಕ್ಷಣ ಮಂತ್ರ್ರಾಲಯ, ಭಾರತ ಸರಕಾರವು ನಡೆಸಿದ ರಾಷ್ಟ್ರ ಮಟ್ಟದ 2023-24ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ‌ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿದೇವಿ ಇವಳು ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಪೆರೆಡ್‌ಗೆ ಆಯ್ಕೆಯಾಗಿರುತ್ತಾಳೆ. ಅಲ್ಲದೆ ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ನಡೆಯುವ ಸಮಾರಂಭದಲ್ಲಿ ತನ್ನ ನೃತ್ಯ ಪ್ರದರ್ಶನವನ್ನು ನೀಡಲಿದ್ದಾಳೆ.

ಸಂಸ್ಥೆಯ ಅಧ್ಯಕ್ಷರೂ, ಸಂಚಾಲಕರೂ ಆಗಿರುವ ಬಿ. ಎಮ್. ಸುಕುಮಾರ ಶೆಟ್ಟಿ ಮತ್ತು ಪ್ರಾಂಶುಪಾಲರಾದ ಡಾ. ಚಿಂತನಾರಾಜೇಶ್ ಈಕೆಯನ್ನು ಅಭಿನಂದಿಸಿದ್ದಾರೆ.

ಗಾರ್ಗಿದೇವಿ ದೇವಲ್ಕುಂದದ ಅಶೋಕ್ ಸುವರ್ಣ ಮತ್ತು ನಾಟ್ಯಗುರು ವಿದುಷಿ ಪ್ರವಿತಾ ಅಶೋಕ್ ಅವರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!