spot_img
Monday, April 6, 2026
spot_img

ಲೋಕಸಭಾ ಚುನಾವಣೆ 2024 : ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) :  ಒಂದೆಡೆ ಬಿಜೆಪಿ ರಾಮ ಮಂದಿರವನ್ನು ಲೋಕಾರ್ಪಣೆ ಮಾಡಿ ಮಗದೊಮ್ಮೆ ಲೋಕಸಭಾ ಚುನಾವಣೆಯನ್ನು ಗೆಲ್ಲುವ ಹುಮ್ಮಸ್ಸಿನಲ್ಲಿದ್ದರೇ, ಇನ್ನೊಂದೆಡೆ ಕಾಂಗ್ರೆಸ್‌ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯಲ್ಲಿದೆ, ನಾವೂ ಏನೂ ಕಡಿಮೆ ಇಲ್ಲ, ನಾವೂ ಚುನಾವಣೆ ಗೆಲ್ಲುತ್ತೇವೆ ಎನ್ನುವ ಹುರುಪಿನಲ್ಲಿರುವುದರ ನಡುವೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ತಾತ್ಕಾಲಿಕ ದಿನಾಂಕವನ್ನು ಪ್ರಕಟಿಸಿದೆ.  

ಉಭಯ ಮೈತ್ರಿ ಪಕ್ಷಗಳು (ಎನ್‌ಡಿಎ ಹಾಗೂ ʼಇಂಡಿಯಾʼ) ಚುನಾವಣಾ ಸಮರ ಗೆಲ್ಲುವುಯದಕ್ಕೆ ಸಜ್ಜಾಗುತ್ತಿವೆ. ರಾಜತಾಂತ್ರಿಕೆ ಹೂಡುತ್ತಿರುವುದರ ನಡುವೆ ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ನಡೆಸಲಾಗುವುದು ಎಂದು ತಾತ್ಕಾಲಿಕ ವೇಳಾ ಪಟ್ಟಿಯನ್ನು ಬಿಡುಗಡೆಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ.

ಚುನಾವಣಾ ಯೋಜಕರ ಪ್ರಾರಂಭ ಹಾಗೂ ಅಂತಿಮ ದಿನಾಂಕಗಳನ್ನು ಲೆಕ್ಕಾಚಾರ ಮಾಡಲು ಚುನಾವಣಾ ಆಯೋಗ ಅಧಿಕಾರಿಗಳಿಗೆ ಅನುವು ಮಾಡಿಕೊಡಲು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!