16.1 C
New York
Friday, October 22, 2021

Buy now

spot_img

ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಿಗೆ ಬೀಳ್ಕೊಡುಗೆ

ಕುಂದಾಪುರ, ಜೂ.25: ಕಾಳಾವರ ಗ್ರಾಮ ಪಂಚಾಯತಿಯ ಅಧಿಕಾರ ಅವಧಿ ಮುಕ್ತಾಯಗೊಂಡಿದ್ದು ಈ ಸಂದರ್ಭದಲ್ಲಿ ಪಂಚಾಯತ್‍ನಲ್ಲಿ ಸದಸ್ಯರಾಗಿ, ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಆಡಳಿತ ಮಂಡಳಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಕಳೆದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಧ್ಯಕ್ಷರಾದ ಸುಖಾನಂದ ಎಸ್. ಹೆಗ್ಡೆ, ಉಪಾಧ್ಯಕ್ಷರಾದ ಸುಜಾತ ಆರ್.ಆಚಾರ್ಯ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಪಂಚಾಯತ್‍ನ ನೊಡೆಲ್ ಅಧಿಕಾರಿ ಯುವಜನಸೇವಾ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ ಶೆಟ್ಟಿ, ನಿರ್ಗಮನ ಆಡಳಿತ ಮಂಡಳಿಗೆ ಶುಭಕೋರಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪಂಚಾಯತಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತಿನ ಅಭಿವೃದ್ದಿ ಅಧಿಕಾರಿ ಪಾಂಡುರಂಗ ಶೇಟ್ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
2,988FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!