spot_img
Monday, April 6, 2026
spot_img

ಅಯೋಧ್ಯೆ ಬಾಲಕರಾಮ ದರ್ಶನಕ್ಕೆ ಸಾಗರೋಪಾದಿಯಲ್ಲಿ ನೆರದ ಭಕ್ತರು | ಪರಿಸ್ಥಿತಿ ನಿಭಾಯಿಸಲಾಗದೇ ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ ಮಾಡಿಕೊಂಡ ಪೊಲೀಸರು !

ಜನಪ್ರತಿನಿಧಿ ವಾರ್ತೆ (ಉತ್ತರ ಪ್ರದೇಶ) : ಅಯೋಧ್ಯೆಐ ಶ್ರೀರಾಮ ಮಂದಿರದಲ್ಲಿ ಬಾಲಕರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದ್ದೆ ತಡ, ದೇಶದಾದ್ಯಂತ ಅಯೋಧ್ಯೆಯ ರಾಮನ ದರ್ಶನಕ್ಕಾಗಿ ಜನ ಸಾಗರೋಪಾದಿಯಲ್ಲಿ ಹರಿದು ಬಂದಿದ್ದಾರೆ. ನಿನ್ನೆ(ಮಂಗಳವಾರ)  ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು. ಪರಿಸ್ಥಿತಿ ನಿಭಾಯಿಸುವುದಕ್ಕೆ ಕೆಲ ಕಾಲ ಮಂದಿರವನ್ನು ಮುಚ್ಚಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು.

ಇಂದು(ಬುಧವಾರ) ಕೂಡ ತೀವ್ರ ಚಳಿಯನ್ನೂ ಲೆಕ್ಕಿಸದೇ, ಜನ ದೇಶದಾದ್ಯಂತ ಜನ ಹರಿದು ಬರುತ್ತಿದ್ದಾರೆ. ಜನಸಂದಣಿ ನಿಯಂತ್ರಿಲಾಗದೆ ಉತ್ತರಪ್ರದೇಶ ಪೊಲೀಸರು ಸಂಪೂರ್ಣ ಸುಸ್ತಾಗಿ ಹೋಗಿದ್ದು, ಸದ್ಯಕ್ಕೆ ಅಯೋಧ್ಯೆಯತ್ತ ಬರದಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಭಕ್ತರ ಸಂದಣಿ ನಿಯಂತ್ರಿಸಲು ರಾಮಮಂದಿರಕ್ಕೆಂದೇ ಒಬ್ಬ ಐಎಎಸ್ ದರ್ಜೆಯ ಮ್ಯಾಜಿಸ್ಟ್ರೇಟರನ್ನೂ ನೇಮಿಸಲಾಗಿದೆ. ಮೊದಲ ದಿನ ಮಧ್ಯಾಹ್ನದ ವೇಳೆ ಸುಮಾರು 2.5 ರಿಂದ 3 ಲಕ್ಷ ಜನರು ದರ್ಶನ ಮಾಡಿದ್ದು, ರಾತ್ರಿ ವೇಳೆ ಅಂದಾಜು 5 ಲಕ್ಷ ಜನರು ಮೊದಲ ದಿನ ರಾಮನ ದರ್ಶನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆಂದು ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ.

ಈ ನಡುವೆ ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಕೆಲವು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದಾರೆ.

ಲಖನೌನಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಬಾರಾಬಂಕಿಯಿಂದ ಅಯೋಧ್ಯೆ ಕಡೆಗಿನ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ. ಈ ಮಧ್ಯೆ, ”ಮೊದಲ ದಿನವೇ ರಾಮಲಲ್ಲಾನ ದರ್ಶನ ಪಡೆಯಬೇಕು ಎಂಬ ಆತುರಬೇಡ. ಮಂದಿರದ ಆವರಣದಲ್ಲಿಸೆಲ್ಫಿ ಕ್ಲಿಕ್ಕಿಸಿಕೊಂಡು ಸರತಿ ಸಾಲಿಗೆ ಅಡ್ಡಿಪಡಿಸಬೇಡಿ. ಸಾಧ್ಯವಾದಷ್ಟು ದಿನ ಅಯೋಧ್ಯೆ ಭೇಟಿ ಮುಂದೂಡಿ,” ಎಂದು ಉ.ಪ್ರದೇಶ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!