spot_img
Monday, April 6, 2026
spot_img

ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಭಾಗವಹಿಸುವವರಿಗೆ ಸುರಕ್ಷತೆ ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಖರ್ಗೆ ಒತ್ತಾಯ  

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಪ್ರಕರಣ ಕೂಡ ದಾಖಲಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ್ ಯಾತ್ರೆ ನಡುವೆ ರಾಹುಲ್ ಗಾಂಧಿಯವರಿಗೆ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿರುವ ಖರ್ಗೆ ಅವರು ನಿನ್ನೆ (ಮಂಗಳವಾರ) ರಾತ್ರಿ ಬರೆದ ಪತ್ರದಲ್ಲಿ ರಾಹುಲ್ ಗಾಂಧಿಯವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜನವರಿ 22ರಂದು ನಾಗಾಂವ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಖರ್ಗೆ ಉಲ್ಲೇಖಿಸಿದ್ದಾರೆ.

ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಆಡಳಿತಾರೂಢ ಸರ್ಕಾರದ ಮಡಿಲ ಮಕ್ಕಳಂತೆ ವರ್ತಿಸುತ್ತಿದ್ದಾರೆ. ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಭದ್ರತೆಗೆ ಅಪಾಯವಿದೆ ಎಂದು ಪತ್ರದಲ್ಲಿ ಖರ್ಗೆ ಆತಂಕ ವ್ಯಕ್ತ ಪಡಿಸಿದ್ದಾರೆ. ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಖರ್ಗೆ ಒತ್ತಾಯಿಸಿದ್ದಾರೆ. 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!