spot_img
Sunday, April 5, 2026
spot_img

ಮಮತಾ ಬ್ಯಾನರ್ಜಿ ಕಾರು ಅಪಘಾತ : ತಲೆಗೆ ಸಣ್ಣ ಪುಟ್ಟ ಗಾಯ, ಅಪಾಯದಿಂದ ಪಾರು !

ಜನಪ್ರತಿನಿಧಿ ವಾರ್ತೆ (ಕೊಲ್ಕತ್ತ) : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಮಮತಾ ಅವರ ತಲೆಗೆ ಪೆಟ್ಟಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಎದುರಿನಿಂದ ಬರುತ್ತಿದ್ದ ವಾಹನಕ್ಕೆ  ಮಮತಾ ಬ್ಯಾನರ್ಜಿ ಇದ್ದ ಕಾರು ಡಿಕ್ಕಿಯಾಗುವುದನ್ನು ತಡೆಯಲು ಯತ್ನಿಸಿದ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಇದರಿಂದ ಮಮತಾ ತಲೆಗೆ ಪೆಟ್ಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರ ತಲೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೋಲ್ಕತ್ತಾಗೆ ಕರೆತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಟ್ಟ ಹವಾಮಾನದ ಕಾರಣ  ಮಮತಾ ಹೆಲಿಕಾಪ್ಟರ್ ಟೇಕ್ ಆಫ್ ಆಗದ ನಂತರ ಅವರು ಕಾರಿನಲ್ಲಿ ಹಿಂತಿರುಗಬೇಕಾಯಿತು. ಕೋಲ್ಕತ್ತಾದಲ್ಲಿ ವೈದ್ಯರು ಆಕೆಗೆ ಚಿಕಿತ್ಸೆ ನೀಡಲಿದ್ದಾರೆ. ಚಾಲಕನ ಪಕ್ಕದಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಮಮತಾ ಬ್ಯಾನರ್ಜಿ ತಲೆ ವಿಂಡ್‌ಸ್ಕ್ರೀನ್‌ಗೆ ಬಡಿದ ನಂತರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐಗೆ  ಮಾಹಿತಿ ನೀಡಿದ್ದಾರೆ

ಆಡಳಿತಾತ್ಮಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾದಿಂದ 102 ಕಿಮೀ ದೂರದಲ್ಲಿರುವ ಪುರ್ಬಾ ಬರ್ಧಮಾನ್‌ ಗೆ ತೆರಳಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!