spot_img
Friday, April 3, 2026
spot_img

ʼಇಂಡಿಯಾʼ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಪಂಜಾಬ್‌ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದ ಆಪ್‌ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಳಿಕ ಈಗ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ʼಇಂಡಿಯಾʼ ಮೈತ್ರಿಕೂಟಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಈ ಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಗವಂತ್ ಮಾನ್ ಇಂಧೂ(ಬುಧವಾರ) ಘೋಷಿಸಿದ್ದಾರೆ. 

ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳನ್ನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಗವಂತ್ ಮಾನ್ ಹೇಳಿದ್ದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳಲ್ಲಿ ಆಪ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಅವರು ಹೇಳಿದ್ದಾರೆ. ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಮಮತಾ ಬ್ಯಾನರ್ಜಿ ತಮ್ಮದೇ ಆದ ನಿರ್ಧಾರವನ್ನು ಹೊಂದಿದ್ದಾರೆ. ನಮಗೆ ನಮ್ಮದೇ ಆದ ನಿರ್ಧಾರವಿದೆ ಎಂದೂ ಹೇಳಿದ್ದಾರೆ

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ 10 ರಿಂದ 12 ಕ್ಷೇತ್ರಗಳನ್ನು ಕೇಳಿದ್ದು, ಮಮತಾ 2ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ನೀಡಲು ಸಿದ್ಧರಿಲ್ಲ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಫರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಇಂದು(ಬುಧವಾರ) ಹೇಳಿದ್ದರು.

ಬಂಗಾಳದಲ್ಲಿ ಸೀಟು ಹೊಂದಾಣಿಕೆ ಸಮಸ್ಯೆ ಮಾತ್ರವಲ್ಲ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿ ಬಗ್ಗೆ ನಿರಂತರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮಮತಾ ಅವರನ್ನು ದುರಹಂಕಾರಿ ಎಂದೂ ಕರೆದಿದ್ದರು. ಟಿಎಂಸಿ ಹಾಗೂ ಕಾಂಗ್ರೆಸ್ ನಡುವಿನ ವಿವಾದದ ಕುರಿತು ಅಸ್ಸಾಂನಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಎರಡೂ ಪಕ್ಷಗಳಿಗೂ ಹಳೆಯ ಸಂಬಂಧವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 2019ರ ಚುನಾವಣೆಯಲ್ಲಿ ಟಿಎಂಸಿ 22 ಸ್ಥಾನಗಳನ್ನು, ಕಾಂಗ್ರೆಸ್ ಎರಡು ಸ್ಥಾನಗಳನ್ನು ಮತ್ತು ಬಿಜೆಪಿ 18 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌ನಿಂದ ಅಧೀರ್ ರಂಜನ್ ಚೌಧರಿ ಹೊರತುಪಡಿಸಿ, ಮಾಜಿ ಕೇಂದ್ರ ಸಚಿವ ಅಬು ಹಸೇಮ್ ಖಾನ್ ಚೌಧರಿ ಮಾಲ್ಡಾ ದಕ್ಷಿಣ ಕ್ಷೇತ್ರದಿಂದ ಗೆದ್ದಿದ್ದಾರೆ.

ಇನ್ನು, ಮಮತಾ ಅಲ್ಲದೆ, ನಿತೀಶ್ ಕುಮಾರ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಎಎಪಿ ಕೂಡ ಗರಿಷ್ಠ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದೆ. 16ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ನಿತೀಶ್ ಅವರ ಪಕ್ಷ ಜೆಡಿಯು ಇತ್ತೀಚೆಗೆ ಹೇಳಿತ್ತು. ಗೆಲ್ಲುವ ಕ್ಷೇತ್ರಗಳಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಯು ಹೇಳಿದೆ. ಬಿಹಾರದಲ್ಲಿ ಜೆಡಿಯು 16 ಕ್ಷೇತ್ರಗಳನ್ನು ಹೊಂದಿದೆ ಎಂದು ಹೇಳೋಣ. ವಿಧಾನಸಭೆಯಲ್ಲೂ ನಮ್ಮದೇ ದೊಡ್ಡ ಸಂಖ್ಯೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಕಾಂಗ್ರೆಸ್ 1, ಆರ್‌ಜೆಡಿ 0, ಜೆಡಿಯು 16 ಕ್ಷೇತ್ರಗಳನ್ನು ಗೆದ್ದಿದ್ದರೆ, ಬಿಜೆಪಿ 16 ಮತ್ತು ಎಲ್‌ಜೆಪಿ 7 ಕ್ಷೇತ್ರಗಳನ್ನು ಗೆದ್ದಿತ್ತು.

ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್  ನಾಯಕರು ನಾವು ಒಟ್ಟಾಗಿ ಲೋಕಸಭಾ ಚುನಾವಣೆ ಎದುರಿಸುತ್ತಾರೆ ಎಂದು ಖಚಿತವಾಗಿ ಹೇಳುತ್ತಾರೆ, ಆದರೆ ಯಾರು ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದನ್ನು ಅವರು ಹೇಳುವುದಿಲ್ಲ. ಇತ್ತೀಚೆಗಷ್ಟೇ ಕಾಂಗ್ರೆಸ್‌ನೊಂದಿಗೆ ಭೇಟಿಯಾದ ನಂತರ, ರಾಮ್ ಗೋಪಾಲ್ ಯಾದವ್ ಅವರು ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್‌ ಜಂಟಿಯಾಗಿ 80 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತೇವೆ ಎಂದು ಹೇಳಿದ್ದರು. ಆದರೇ ಸಮಾಜವಾದಿ ಪಾರ್ಟಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬುದನ್ನು ಅವರು ಹೇಳಿಲ್ಲ.  

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!