Sunday, September 8, 2024

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ದಿನಾಚರಣೆ

ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿ ೧೩ನೇ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ ಸುಧಾಕರ ವಕ್ವಾಡಿ ಭಾಗವಹಿಸಿ “ಸಂವಿಧಾನದ ಆಶಯಗಳನ್ನು ಆರ್ಥೈಸಿಕೊಂಡು ನಾವು ನಮ್ಮ ಮತಗಳನ್ನು ಚಲಾಯಿಸಿದಾಗ ಸೂಕ್ತ ವ್ಯಕ್ತಿಗಳು ನಮ್ಮ ಪ್ರತಿನಿಧಿಗಳಾಗಿ ಆಯ್ಕೆಗೊಂಡು, ಸಮರ್ಥ ನಾಯಕತ್ವದಲ್ಲಿ ರಾಜಕೀಯ ಸ್ಥಿರತೆ, ಸಮಾಜಿಕ ಬದ್ಧತೆಯೊಂದಿಗೆ ಸರ್ವತೋಮುಖ ಅಭಿವೃದ್ಧಿಯು ಸಾಧ್ಯವಾಗುತ್ತದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿ, ಪ್ರತಿಜ್ಙಾ ವಿಧಿಯನ್ನು ಬೋಧಿಸಿ, ವಿದ್ಯಾರ್ಥಿಗಳಾದ ನೀವು ಯಾವುದೇ ಪ್ರಲೋಭನೆಗಳಿಗೆ ಒಳಗಾಗದೆ ಮತ ಚಲಾಯಿಸುವುದರೊಂದಿಗೆ, ಸಮಾಜದಲ್ಲಿ ಮತದಾನದ ಮಹತ್ವದ ಬಗ್ಗೆ ತಿಳಿ ಹೇಳಿದಾಗ, ಸೂಕ್ತ ಪ್ರತಿನಿಧಿಯನ್ನು ಆಯ್ಕೆ ಮಾಡುವುದರೊಂದಿಗೆ, ಪ್ರಜಾಪ್ರಭುತ್ವ ಇನ್ನಷ್ಟು ಸಧೃಡಗೊಳ್ಳುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ಡಾ. ಭಾಗೀರಥಿ ನಾಯ್ಕ, ವಿದ್ಯಾರ್ಥಿ ನಾಯಕ ಗೌರೀಶ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅನುಷಾ ಮತ್ತು ತಂಡದವರು ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಸಂತೋಷ ನಾಯ್ಕ ಹೆಚ್ ಸ್ವಾಗತಿಸಿದರು. ಸತ್ಯವ್ಯಾಸ ವಂದಿಸಿದರು. ಅನನ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!