spot_img
Friday, April 3, 2026
spot_img

ಶೆಟ್ಟರ್‌ಗೆ ಕಾಂಗ್ರೆಸ್‌ನಿಂದ ಯಾವುದೇ ಅನ್ಯಾಯ ಆಗಿಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಮಡಿಕೆರಿ) : ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತೆ ಮರಳಿ ಮಾತೃ ಪಕ್ಷ ಬಿಜೆಪಿಗೆ ಘರ್‌ವಾಪ್ಸಿ ಮಾಡಿರುವ  ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಯಾಕ್ಷನ್‌ ನೀಡಿದ್ದಾರೆ.

ಇಲ್ಲಿ ವರದಿಗಾರರಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಗದೀಶ್‌ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ನಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೇಟ್‌ ನೀಡದೇ ವಂಚಿಸಿದೆ ಎಂದಿದ್ದಲ್ಲದೇ, ಇನ್ಮುಂದೇ ಯಾವುದೇ ಕಾರಣಕ್ಕೂ ಬಿಜೆಪಿ ಸೇರ್ಪಡೆಯಾಗಲ್ಲ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಟಿಕೇಟ್‌ ನೀಡದೆ ಬಿಜೆಪಿ ವಂಚಿಸಿದೆ ಎಂದು ಕಾಂಗ್ರೆಸ್‌ ಗೆ ಬಂದಿದ್ದರು. ಕಾಂಗ್ರೆಸ್‌ ಅವರಿಗೆ ಟಿಕೇಟ್‌ ನೀಡಿತ್ತು. ಸ್ವ ಕ್ಷೇತ್ರದಲ್ಲೇ ಅವರು ಸೋತಿದ್ದಾರೆ. ಆದರೂ ಅವರಿಗೆ ವಿಧಾನಪರಿಷತ್‌ ಸದಸ್ಯ ಸ್ಥಾನ ನೀಡಲಾಯಿತು. ಜಗದೀಶ್‌ ಶೆಟ್ಟರ್‌ ಗೆ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡಿಲ್ಲ. ಆದರೇ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರ ಗೊತ್ತಾಗಿಲ್ಲ ಎಂದು ಇಲ್ಲಿ ಇಂದು(ಗುರುವಾರ) ವರದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

ಇತ್ತೀಚೆಗೆ ನನ್ನೊಂದಿಗೆ ಮಾತನಾಡುವಾಗಲೂ ಬಿಜೆಪಿ ನನಗೆ ವಂಚಿಸಿದೆ ಎಂದೂ ಹೇಳಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!