Sunday, September 8, 2024

ಜನವರಿ 28ರಂದು ನಿತೀಶ್ ಕುಮಾರ್ ಬಿಜೆಪಿ ಜೊತೆ ಮತ್ತೆ ಮೈತ್ರಿಯಾಗಿ ಮುಖ್ಯಂತ್ರಿಯಾಗಿ ಪ್ರಮಾಣ ವಚನ ಬಹುತೇಕ ನಿಶ್ಚಿತ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ನಿಶ್ಚಿತ ಎಂದು ಹೇಳಲಾಗುತ್ತಿದೆ. ಆರ್‌ಜೆಡಿ-ಜೆಡಿಯು ಮೈತ್ರಿ ಸರ್ಕಾರ ವಿಸರ್ಜಿಸಿ ನಿತೀಶ್ ಕುಮಾರ್ ಮತಯ್ತೆ ಮರಳಿ ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ಜನವರಿ 28ರಂದು ನಿತೀಶ್ ಕುಮಾರ್ ಬಿಜೆಪಿ ಜೊತೆ ಮತ್ತೆ ಮೈತ್ರಿ ಮಾಡಿ ಮುಖ್ಯಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿಯಾಗಿ ಬಿಜೆಪಿಯ ಸುಶೀಲ್ ಮೋದಿ ಆಗಬಹುದು ಎಂದು ಬಲ್ಲ ಮೂಲಗಳು ಹೇಳಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಜೆಡಿಯು-ಬಿಜೆಪಿ ಒಂದಾದರೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಉಳಿಯಲಿದ್ದು, ಬಿಜೆಪಿಯಿಂದ ಸುಶೀಲ್ ಮೋದಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾತ್ರವಲ್ಲದೇ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳಾಗಬಹುದು ಎಂದೂ ಹೇಳಲಾಗುತ್ತಿದೆ.

ಬಿಜೆಪಿಯ ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ, ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ, ಬಿಹಾರ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಭಿಖುಭಾಯಿ ದಲ್ಸಾನಿಯಾ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ, ಮಾಜಿ ಉಪಮುಖ್ಯಮಂತ್ರಿ ರೇಣುದೇವಿ ಸೇರಿದಂತೆ ಕೆಲವು ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ನಂತರ ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಅವರು, ನಿತೀಶ್ ಕುಮಾರ್ ಪುನಃ ಬಿಜೆಪಿ ಜತೆ ಮೈತ್ರಿಯಾಗಲಿದ್ದಾರೆ ಎಂಬುದರ ಕುರಿತಾದ ಪತ್ರಕರ್ತರು ಕೇಳಿದ ನಿರಂತರ ಪ್ರಶ್ನೆಗಳನ್ನು ತಪ್ಪಿಸಿ, ಲೋಕಸಭೆ ಚುನಾವಣೆಯ ಸಿದ್ಧತೆಗಾಗಿ ಮಾತ್ರ ಈ ಸಭೆ ನಡೆಸಲಾಗಿದೆ ಎಂದು ಹೇಳಿದ್ದರು.

ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ನಿತೀಶ್ ಕುಮಾರ್ ಅವರು ಮತ್ತೆ ಎನ್‌ಡಿಎ ಮೈತ್ರಿಕೂಟಕ್ಕೆ ಮರಳಲು ಹಲವು ಸೂತ್ರಗಳನ್ನು ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಈ ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರದಲ್ಲಿ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಂತೆ ಪಕ್ಷದ ಹೈಕಮಾಂಡ್ ಬಿಹಾರ ರಾಜ್ಯಾಧ್ಯಕ್ಷ ಸೇರಿದಂತೆ ಎಲ್ಲ ನಾಯಕರಿಗೆ ಸೂಚನೆ ನೀಡಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!