spot_img
Wednesday, May 20, 2026
spot_img

ನಿತೀಶ್‌ ಕುಮಾರ್‌ ʼಇಂಡಿಯಾʼ ಮೈತ್ರಿಕೂಟದಲ್ಲಿದ್ದಿದ್ದರೇ, ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿದ್ದವು : ಅಖಿಲೇಶ್‌ ಯಾದವ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ನಿತೀಶ್ ಕುಮಾರ್ ಅವರು ವಿರೋಧ ಪಕ್ಷವಾದ ʼಇಂಡಿಯಾʼ ಮೈತ್ರಿಯೊಂದಿಗೆ ಬಲವಾಗಿ ನಿಂತಿದ್ದರೆ ಅವರು ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿದ್ದವು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು  ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ನಿಶ್ಚಿತ ಎಂದು ಹೇಳಲಾಗುತ್ತಿದೆ. ಆರ್‌ಜೆಡಿ-ಜೆಡಿಯು ಮೈತ್ರಿ ಸರ್ಕಾರ ವಿಸರ್ಜಿಸಿ ನಿತೀಶ್ ಕುಮಾರ್ ಮತಯ್ತೆ ಮರಳಿ ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿತ್ತು, ಈ ವಿಚಾರಕ್ಕೆ ಅಖಿಲೇಶ್‌ ಪ್ರತಿಕ್ರಿಯಿಸಿದ್ದಾರೆ.  

ಇದೇ ಜನವರಿ 28ರಂದು ನಿತೀಶ್ ಕುಮಾರ್ ಬಿಜೆಪಿ ಜೊತೆ ಮತ್ತೆ ಮೈತ್ರಿ ಮಾಡಿ ಮುಖ್ಯಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿಯಾಗಿ ಬಿಜೆಪಿಯ ಸುಶೀಲ್ ಮೋದಿ ಆಗಬಹುದು ಎಂದು ಬಲ್ಲ ಮೂಲಗಳು ಹೇಳಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!