spot_img
Friday, April 3, 2026
spot_img

ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ : ರಾಹುಲ್‌ ಗಾಂಧಿ

ಜನಪ್ರತಿನಿಧಿ ವಾರ್ತೆ ( ನವದೆಹಲಿ ) : ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವುದೇ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ  ಇಂದು(ಶುಕ್ರವಾರ) ಅಭಿಪ್ರಾಯ ಪಟ್ಟಿದ್ದಾರೆ.

ಗಣರಾಜ್ಯೋತ್ಸವದಂದು ದೇಶದ ನಾಗರಿಕರಿಗೆ ಶುಭಾಶಯ ಕೋರಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಒಂದುಗೂಡಿಸುವ ಸಂವಿಧಾನ ಭಾರತೀಯ ಪ್ರಜಾತಂತ್ರದ ಆತ್ಮವಾಗಿದೆ ಎಂದಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ʼಎಕ್ಸ್ʼ ಖಾತೆಯಲ್ಲಿ ಅವರು, ಸಂವಿಧಾನದ ಮೂಲಭೂತ ತತ್ವಗಳ ರಕ್ಷಣೆ ಹಾಗೂ ನಿಷ್ಠೆಯು ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ. ಗಣರಾಜ್ಯೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. “ಜೈ ಹಿಂದ್” ಎಂದು ಅವರು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕೂಡ ತಮ್ಮ ದೇಶವಾಸಿಗಳಿಗೆ ಸಂವಿಧಾನದ ಮೂಲಭೂತ ತತ್ವಗಳನ್ನು ರಕ್ಷಿಸುವಂತೆ ಕರೆ ನೀಡಿದ್ದಾರೆ. “ಅನ್ಯಾಯ ಹಾಗೂ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ದೇಶದ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮಗೆ ನ್ಯಾಯದ ಹಕ್ಕು ಸಿಗುವವರೆಗೂ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!