spot_img
Friday, April 3, 2026
spot_img

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪತ್ರಕರ್ತರನ್ನು ಹೊರದಬ್ಬಿಸಿದ ಉಸ್ತುವಾರಿ ಸಚಿವೆ: ಕುಂದಾಪುರ ತಾ. ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಜನಪ್ರತಿನಿಧಿ ವಾರ್ತೆ(ಕುಂದಾಪುರ ): ಇಂದು (ಜ.27, ಶನಿವಾರ) ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯ ವೇಳೆ ಕಾಂಗ್ರೆಸ್ ನಾಯಕರ ನಡೆಯಿಂದಾಗುತ್ತಿರುವ ಅಸಮಾಧಾನದ ವಿರುದ್ಧ ಕಾರ್ಯಕರ್ತರು ಮಾತನಾಡುತ್ತಿರುವ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಮಾಧ್ಯಮದವರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿ ಹೊರದಬ್ಬಿರುವುದನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದೆ.

ಮಾಧ್ಯಮದವರನ್ನು ಹೊರಹಾಕಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕಾರ್ಯಕರ್ತರ ಸಭೆಯಲ್ಲಿ ಕುಂದಾಪುರ ಬ್ಲಾಕ್‌ ಕಾಂಗ್ರಸ್‌ನ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರುಗಳ ವಿಚಾರದಲ್ಲಿ ಮಾತನಾಡುತ್ತಿದ್ದ ವೇಳೆ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು ಸಭಾ ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿ ತಳ್ಳಿರುವುದ್ದಷ್ಟೇ ಅಲ್ಲದೇ, ʼಮೇಡಂ ಹೇಳಿದ್ದಾರೆʼ ಎಂದು ಬಲವಂತವಾಗಿ ಮಾಧ್ಯಮದವರು ಮಾಡುತ್ತಿದ್ದ ವೀಡಿಯೋ ಚಿತ್ರೀಕರಣವನ್ನು ತಡೆದು ಮಾಧ್ಯಮಗಳ ವಿಡೀಯೋಗ್ರಾಫರ್‌ಗಳನ್ನು ಹಾಗೂ ಪತ್ರಕರ್ತರನ್ನು ಹೊರ ತಳ್ಳಿದ ಘಟನೆ ನಡೆದಿದೆ. ಇದರಿಂದ ಕೆಲ ಹೊತ್ತು ಗೊಂದಲದ ವಾತಾವರಣ ಸೃಷ್ಟಿಯಾಯಿತು. ಇವೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಹಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಸಹಿತ ಎರಡು ಬ್ಲಾಕ್ ಕಾಂಗ್ರೆಸ್‌ನ ಮುಖಂಡರುಗಳು ದುರ್ವರ್ತನೆ ತೋರಿದ ಕಿಶನ್‌ ಹೆಗ್ಡೆಯವರನ್ನು ತಡೆಯುವ ಯಾವುದೇ ಪ್ರಯತ್ನ ಮಾಡಲಿಲ್ಲ. ಬಳಿಕ ಸಚಿವೆ ಹೆಬ್ಬಾಳ್ಕರ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ಮೊದಲಿಗೆ ಮಾಧ್ಯಮದವರನ್ನು ಹೊರಹೋಗಿ ಎಂದು ನೇರವಾಗಿ ಹೇಳುವ ಮೂಲಕ ಅವಮಾನ ಪಡಿಸಿ ಪತ್ರಿಕಾ ಸ್ವಾತಂತ್ರ್ಯಕ್ಕೆ ದಕ್ಕೆ ತಂದಿದ್ದಾರೆ.‌

ಬಹಿರಂಗ ಕ್ಷಮೆ ಕೇಳಲು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹ :

ಕುಂದಾಪುರದಲ್ಲಿ ನಡೆಯುವ ವಿವಿಧ ಪಕ್ಷಗಳ ಕಾರ್ಯಕ್ರಮದಲ್ಲಿ ಕುಂದಾಪುರ ಮಾಧ್ಯಮ ಮಿತ್ರರು ಸೌಹಾರ್ದಯುತವಾಗಿ ಭಾಗವಹಿಸಿ ಕಾರ್ಯಕ್ರಮದ ವರದಿ ಮಾಡುತ್ತಾ ಬಂದಿದ್ದು ಕಾಂಗ್ರೆಸ್ ಪಕ್ಷದ ಈ ದುರ್ವರ್ತನೆ ಪತ್ರಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಆದ್ದರಿಂದ ಈ ಘಟನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾ ಕಾರ್ಯಾಧ್ಯಕ್ಷ ಕೊಳ್ಕೆಬೈಲು ಕಿಶನ್ ಹೆಗ್ಡೆ ಹಾಗೂ ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!