Sunday, September 8, 2024

ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ : ಮಲ್ಲಿಕಾರ್ಜುನ್‌ ಖರ್ಗೆ

ಜನಪ್ರತಿನಿಧಿ ವಾರ್ತೆ (ಕಲಬುರುಗಿ) : ʼಇಂಡಿಯಾʼ ಮೈತ್ರಿಕೂಟ ಒಗ್ಗಟ್ಟಾಗಿರಲು ಪ್ರಯತ್ನ ಮಾಡುತ್ತದೆ. ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇಂದು(ಶನಿವಾರ) ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿದ ಅವರು, ನಾಳೆ(ಆದಿತ್ಯವಾರ) ಡೆಹ್ರಾಡೂನ್​​ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ. ʼಇಂಡಿಯಾʼ ಮೈತ್ರಿಕೂಟಕ್ಕೆ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಮಾಹಿತಿಯಿಲ್ಲ. ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಒಗ್ಗಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂದು ಹೇಳಿದರು. 

ಜೆಡಿಯು ಹಾಗೂ ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿರುವ ಮತ್ತು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ ಎಂಬ ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಗಳ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದ ಕುತೂಹಲ ಕೆರಳಿಸಿದೆ.

“ಜೆಡಿಯು ʼಇಂಡಿಯಾʼ ಮೈತ್ರಿಯಿಂದ ಹೊರಬರುವ ಬಗ್ಗೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಅವರ ಮನಸ್ಸಲ್ಲೇನಿದೆ ಎಂಬುದು ಸ್ಪಷ್ಟವಾಗಿಲ್ಲ. ನಾನು ನಾಳೆ ಡೆಹ್ರಾಡೂನ್‌ಗೆ ಪ್ರಯಾಣಿಸುತ್ತಿದ್ದೇನೆ, ನಂತರ ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋಗಿ ಸಂಪೂರ್ಣ ಮಾಹಿತಿಯನ್ನು ಪಡೆದು ನಿಮಗೆ ತಿಳಿಸುತ್ತೇನೆ, ಏನಾಗುತ್ತೋ ನೋಡೋಣ… ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ನಮ್ಮದು ಎಂದು ಮಮತಾ ಬ್ಯಾನರ್ಜಿ, ಲಾಲು ಪ್ರಸಾದ್ ಯಾದವ್, ಸೀತಾರಾಂ ಯೆಚೂರಿ ಜೊತೆ ಮಾತನಾಡಿದ್ದೇನೆ, ಒಗ್ಗೂಡಿದರೆ ಉತ್ತಮ ಹೋರಾಟ ನೀಡುತ್ತೇವೆ, ʼಇಂಡಿಯಾʼ ಮೈತ್ರಿ ಯಶಸ್ವಿಯಾಗುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವ ಆಸಕ್ತಿ ಇರುವವರು ತಮ್ಮ ಮನಸ್ಸನ್ನು ಬದಲಾಯಿಸುವುದಿಲ್ಲ ಮತ್ತು ನಮ್ಮೊಂದಿಗೆ ಇರುತ್ತಾರೆ ಎಂದರು. 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!