spot_img
Friday, April 3, 2026
spot_img

ನಿತೀಶ್‌ ಕುಮಾರ್‌ ನಾಳೆ ರಾಜೀನಾಮೆ, ನಾಳೆಯೇ ಬಿಜೆಪಿ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸಾಧ್ಯತೆ !

ಜನಪ್ರತಿನಿಧಿ ವಾರ್ತೆ (ಬಿಹಾರ) : ʼಮಹಾಘಟಬಂಧನ್‌ʼ ನೇತೃತ್ವದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನಾಳೆ(ಬಾನುವಾರ) ರಾಜಿನಾಮೆ ನೀಡುವ ಸಾದ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ಮಾಹಿತಿ ನೀಡಿವೆ.

ನಾಳೆ ಬೆಳಗ್ಗೆ(ಭಾನುವಾರ) ರಾಜೀನಾಮೆ ನೀಡುವುದು ಬಹುತೇಕ ಖಚಿತ ಎಂದು ಹೆಸರು ಹೇಳಲು ಬಯಸದ ನಾಯಕರೊಬ್ಬರು ರಾಷ್ಟ್ರೀಯ ಸುದ್ದಿ ಸಂಸ್ಥೆ ʼಪಿಟಿಐʼ ಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿಯೊಂದಿಗೆ ಸೇರ್ಪಡೆಗೊಳ್ಳಲಿರುವ ನಿತೀಶ್‌ ಕುಮಾರ್‌ ಅವರು ರಾಜೀನಾಮೆಗೂ ಮುನ್ನಾ ಶಾಸಕಾಂಗ ಪಕ್ಷದ ಸಭೆ ಮಾಡಲಿದ್ದಾರೆ ಎಂದು ತಿಳಿದು ಬಂದಿದ್ದು. ಆ ಬಳಿಕ ಬಿಜೆಪಿ ಬೆಂಬಲದೊಂದಿಗೆ ಸೇರ್ಪಡೆಗೊಂಡು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳನ್ನು ತೆರೆದಿರಲು ಸೂಚಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮಾಹಿತಿ ನೀಡಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!