spot_img
Friday, April 3, 2026
spot_img

ಕುಂದಾಪುರದಲ್ಲಿ ನೂತನ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಉಪವಿಭಾಗದ ಕೇಂದ್ರವಾಗಿದ್ದು ಅನೇಕ ಉಪವಿಭಾಗ ಮಟ್ಟದ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಡುಪಿ ಜಿಲ್ಲೆಯ ಕುಂದಾಪುರ ಹೊರತುಪಡಿಸಿ ಉಳಿದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಳೆ ಪ್ರವಾಸಿ ಮಂದಿರರ ಜೊತೆ ಹೊಸ ಪ್ರವಾಸಿ ಮಂದಿರಗಳು ನಿರ್ಮಾಣವಾಗಿರುತ್ತವೆ.

ಆದರೆ ಉಪವಿಭಾಗದ ಕೇಂದ್ರವಾಗಿರುವ ಕುಂದಾಪುರದಲ್ಲಿ ಮಾತ್ರ ಹಳೇಯ ಕೇವಲ 2 ಕೊಠಡಿಯಿರುವ ಪ್ರವಾಸಿ ಮಂದಿರವಿರುತ್ತದೆ. ಇಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಿಸಲು ಸ್ಥಳಾವಕಾಶವಿದ್ದು ಸಾರ್ವಜನಿಕರ ಬೇಡಿಕೆಯಿದೆ. ಆದ್ಯತೆಯ ಮೇರೆಗೆ ಕುಂದಾಪುರಕ್ಕೆ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಂಜೂರಾತಿಯನ್ನು ನೀಡಿ ಸೂಕ್ತ ಆದೇಶ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದಾರೆ.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ ಶೆಟ್ಟಿಯವರು ಮಂಜುನಾಥ ಭಂಡಾರಿಯವರಲ್ಲಿ ಮನವಿ ಮಾಡಿದ್ದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪುರಸಭಾ ಸದಸ್ಯ ಚಂದ್ರಶೇಖರ ಶೆಟ್ಟಿ, ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!