Sunday, April 28, 2024

ಲೋಕಸಭಾ ಚುನಾವಣಗೆ ಸ್ಪರ್ಧಿಸಲ್ಲ : ದಿಗ್ವಿಜಯ ಸಿಂಗ್

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಈ ಬರುವ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಹಿರಿಯ ನಾಯಕರನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದೆ ಎಂದು ವರದಿಯಾಗಿರುವ ಸಂದರ್ಭದಲ್ಲಿ ಹಾಲಿ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಿಂಗ್, ಈ ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಯಾಕೆಂದರೆ ‘ನಾನು ರಾಜ್ಯಸಭಾ ಸದಸ್ಯನಾಗಿದ್ದೇನೆ. ಇನ್ನೂ ಎರಡು ವರ್ಷ ಅಧಿಕಾರವಧಿ ಉಳಿದಿದೆ’. ರಾಜ್‌ಗಢ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ನಿರ್ಧರಿಸಲಿದೆ  ಎಂದು ಸಿಂಗ್ ತಿಳಿಸಿದ್ದಾರೆ.

ಸಿಂಗ್ 2019ರಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸುಮಾರು 3.65 ಲಕ್ಷ ಮತಗಳ ಅಂತರದಿಂದ ಸೋಲನುಭವಿಸಿದ್ದರು.  ದಿಗ್ವಿಜಯ ಸಿಂಗ್ 1984 ಹಾಗೂ 1991ರಲ್ಲಿ ರಾಜ್‌ಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಒಟ್ಟು 29 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 28 ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರವನ್ನು ಪಡೆದುಕೊಂಡು ತೃಪ್ತಪಟ್ಟುಕೊಂಡಿತ್ತು.

ಇದೇ ಸ್ಥಾನವನ್ನು ಅವರ ಕಿರಿಯ ಸಹೋದರ ಲಕ್ಷ್ಮಣ್ ಸಿಂಗ್ ಅವರು 1994 ಮತ್ತು 2004 ರ ನಡುವೆ ಐದು ಬಾರಿ ಪ್ರತಿನಿಧಿಸಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ, ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ, ಕಾಂಗ್ರೆಸ್ ಎಂಪಿಯ 29 LS ಸ್ಥಾನಗಳಲ್ಲಿ ಕೇವಲ ಒಂದನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು, ಆಗಿನ ಸಿಎಂ ಕಮಲ್ ನಾಥ್ ಅವರ ಮಗ ನಕುಲ್ ನಾಥ್ ಅವರ ತಂದೆಯ ಜೇಬಿನಲ್ಲಿ ಬರೋ ಛಿಂದ್ವಾರಾದಿಂದ ವಿಜಯಶಾಲಿಯಾಗಿದ್ದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!