spot_img
Friday, April 3, 2026
spot_img

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ರಿಷಿಕಾ ದೇವಾಡಿಗ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

ಕುಂದಾಪುರ: ಜ್ಞಾನ ವಾರಿಧಿ ಮತ್ತು ಜ್ಞಾನ ಶರಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಆಯೋಜಿಸಿರುವ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8 ನೆಯ ತರಗತಿಯ ಕುಮಾರಿ ರಿಷಿಕಾ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈಕೆ ಕಳೆದ ವರ್ಷ ನಡೆದ ಇದೇ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿನಿಯನ್ನು ಧರ್ಮಸ್ಥಳದಲ್ಲಿ ನಡೆದ “ಪುರಸ್ಕಾರ ಸಮಾರಂಭದಲ್ಲಿ” ಖ್ಯಾತ ಸಾಹಿತಿ ಡಾ. ವಸಂತ ಭಾರದ್ವಾಜ್, ಕಬ್ಬಿನಾಲೆ ಇವರು ಸನ್ಮಾನಿಸಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!