Sunday, September 8, 2024

ನಿತೀಶ್ ಕುಮಾರ್ ಒಬ್ಬ ʼಕುತಂತ್ರಿʼ : ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್‌

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎಗೆ ಮರಳುತ್ತಿದ್ದಂತೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟವು “ಕ್ಲೀನ್ ಸ್ವೀಪ್” ಮಾಡಲಿದೆ ಎಂದು ಖ್ಯಾತ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರತಿಪಾದಿಸಿದ್ದಾರೆ.

ʼಆಜ್ ತಕ್‌ʼನ (ಇಂಡಿಯಾ ಟುಡೇ ಸೋದರ ಸಂಸ್ಥೆ) ಚಿತ್ರಾ ತ್ರಿಪಾಠಿ ನಡೆಸಿಕೊಟ್ಟ ವಿಶೇಷ ಸಂದರ್ಶನದಲ್ಲಿ, ಪ್ರಶಾಂತ್ ಕಿಶೋರ್ ಅವರು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ಮಹಾಘಟಬಂಧನ್ ಅನ್ನು ತೊರೆದು ಬಂದಿದ್ದಕ್ಕಾಗಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ್ದಲ್ಲದೇ ಅವರು “ತಮ್ಮ ಜೀವನದ ಕೊನೆಯ ಇನ್ನಿಂಗ್ಸ್ ಆಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಅಷ್ಟಲ್ಲದೇ, ನಿತೀಶ್ ಕುಮಾರ್ ಅವರನ್ನು ʼಕುತಂತ್ರಿʼ ಎಂದು ಕರೆದಿರುವ ಪ್ರಶಾಂತ್ ಕಿಶೋರ್, 2025ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ಯಾವುದೇ ಮೈತ್ರಿಕೂಟಕ್ಕೆ ಸ್ಪರ್ಧಿಸಿದರೂ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ. ಅವರು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ ನಾನು ನನ್ನ ಕೆಲಸವನ್ನು ತ್ಯಜಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ನಿತೀಶ್ ಕುಮಾರ್ ನಿನ್ನೆ(ಭಾನುವಾರ) ಮಹಾಘಟಬಂಧನ್ (ಮಹಾ ಮೈತ್ರಿ) ಸರ್ಕಾರದ ಅಂಗ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗಿನ ಸಂಬಂಧವನ್ನು ಮುರಿದರು ಮತ್ತು ದಾಖಲೆಯ ಒಂಬತ್ತನೇ ಬಾರಿಗೆ ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

JD(U) ಮುಖ್ಯಸ್ಥರು 2022ರ ಆಗಸ್ಟ್‌ನಲ್ಲಿ ಮಹಾಘಟಬಂಧನ್‌ಗೆ ಸೇರಿದ್ದರು, ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡಾಗ, ಅದು ತನ್ನ ಪಕ್ಷವನ್ನು “ವಿಭಜಿಸಲು” ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಬಿಜೆಪಿಯನ್ನು ʼಫ್ಲಿಪ್-ಫ್ಲಾಪ್‌ʼಗಳ ಪಕ್ಷ ಎಂದು ಕರೆದ ಪ್ರಶಾಂತ್ ಕಿಶೋರ್, 2025ರ ವಿಧಾನಸಭಾ ಚುನಾವಣೆಯ ಮೊದಲು ಜೆಡಿಯು-ಬಿಜೆಪಿ ಮೈತ್ರಿ ಅಸ್ತಿತ್ವದಲ್ಲಿರಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಜನ ಅವರನ್ನು ತಿರಸ್ಕರಿಸಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ಅಸ್ತಿತ್ವ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡುವುದಕ್ಕೂ ಸಿದ್ಧರಿದ್ದಾರೆ. ಬಿಹಾರದಲ್ಲಿನ ರಾಜಕೀಯ ಬಿಕ್ಕಟ್ಟು ಪ್ರತಿಪಕ್ಷ ʼಇಂಡಿಯಾʼ ಮೈತ್ರಿ ಬಣವನ್ನು ನಾಶ ಮಾಡುವ ಬಿಜೆಪಿಯ ಕ್ರಮವಾಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ ಅವರಿಗೆ ಲಾಭವಾಗಲಿದೆ ಎಂದು ಅವರು ಅವರು ಸಂದರ್ಶನದಲ್ಲಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!