spot_img
Friday, April 3, 2026
spot_img

ರಾಜ್ಯದ 4 ಸ್ಥಾನಗಳನ್ನು ಒಳಗೊಂಡು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ !

ಜನಪ್ರತಿನಿಧಿ ವಾರ್ತೆ ( ನವ ದೆಹಲಿ) : ಕೇಂದ್ರ ಚುನಾವಣಾ ಆಯೋಗ(ಇಸಿಐ) ಇಂದು(ಸೋಮವಾರ) 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ಫೆಬ್ರವರಿ 27 ರಂದು ಮತದಾನ ನಡೆಯಲಿದೆ ಎಂದು ಹೇಳಿದೆ.

ಎಪ್ರಿಲ್ 2024 ರಲ್ಲಿ ನಿವೃತ್ತಿಯಾಗಲಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಒಳಗೊಂಡು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಸೇರಿದಂತೆ ದೇಶದ ಒಟ್ಟು 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಫೆ.15  ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಹಾಗೂ ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ 6, ಪಶ್ಚಿಮ ಬಂಗಾಳ 5, ಮಧ್ಯ ಪ್ರದೇಶ 5, ಗುಜರಾತ್ 4, ಆಂಧ್ರ ಪ್ರದೇಶ 3, ತೆಲಂಗಾಣ 3, ರಾಜಸ್ಥಾನ 3, ಕರ್ನಾಟಕ 4, ಉತ್ತರಾಖಂಡ 1, ಛತ್ತೀಸ್‌ಗಢ 1, ಒಡಿಶಾ 3, ಹರ್ಯಾಣ 1 ಹಾಗೂ ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!