spot_img
Wednesday, May 20, 2026
spot_img

ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? : ಅಶೋಕ್‌, ಎಚ್‌ಡಿಕೆಗೆ ಕಾಂಗ್ರೆಸ್‌ ಪ್ರಶ್ನೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯ ಬಿಜೆಪಿಯ ಲೋಕಸಭಾ ಚುನಾವಣೆಯ ತಾಲೀಮು ಮಂಡ್ಯದಲ್ಲಿ ಶುರುವಾಗಿದೆ, ಇದಕ್ಕೆ ಸೋಕಾಲ್ಡ್ ಜಾತ್ಯತೀತ ಜನತಾ ದಳ ಪೂರ್ಣ ಸಹಕಾರ ನೀಡುತ್ತಿದೆ ಎಂದು ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್‌ ನವರು ʼಧ್ವಜ ಪ್ರಕರಣʼಕ್ಕೆ ಸಂಬಂದಿಸಿದಂತೆ ಆಡಳಿತರೂಢ  ಕಾಂಗ್ರೆಸ್‌ ಟೀಕೆ ಮಾಡಿದೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಹಾಗೂ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ದಮ್ಮು ತಾಕತ್ತಿದ್ದರೆ ಈ ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕಾಂಗ್ರೆಸ್‌ ಸವಾಲು ಎಸೆದಿದೆ.

ಕೆರೆಗೋಡು ಗ್ರಾಮದಲ್ಲಿ ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜ ಹಾರಿಸುವುದಕ್ಕಾಗಿ ಮಾತ್ರ ಧ್ವಜ ಸ್ಥಂಭ ಸ್ಥಾಪನೆಗೆ ಮುಚ್ಚಳಿಕೆ ಬರೆದುಕೊಟ್ಟು ಅನುಮತಿ ಪಡೆದಿದ್ದಾರೆ. ಬರೆದುಕೊಟ್ಟ ಮುಚ್ಚಳಿಕೆಯಂತೆ ಹಾಗೂ ಯಾವುದಕ್ಕೆ ಅನುಮತಿ ಪಡೆದಿದ್ದಾರೋ ಅದನ್ನ ಪಾಲಿಸಬೇಕೇ  ಬೇಡವೇ? ಎಂದು ಪ್ರಶ್ನಿಸಿದೆ.

ರಾಷ್ಟ್ರ ಧ್ವಜ ಹಾರಿಸುವ ಉದ್ದೇಶವನ್ನು ಹೈಜಾಕ್ ಮಾಡಿ ಮಂಡ್ಯದಲ್ಲಿ ಶಾಂತಿ ಕದಡಬೇಕು, ಸರ್ಕಾರಕ್ಕೆ ಸವಾಲು ಹಾಕಬೇಕು ಎನ್ನುವುದು ನಿಮ್ಮ ಪೂರ್ವಯೋಜಿತ ಹುನ್ನಾರವಾಗಿತ್ತಲ್ಲವೇ? ನಿಮ್ಮ ನಿಷ್ಠೆ ಸಂವಿಧಾನಕ್ಕೋ. ಮನುವಾದಕ್ಕೋ ? ನಿಮ್ಮ ನಿಷ್ಠೆ ದೇಶಕ್ಕೋ, ದೇಶದ್ರೋಹಕ್ಕೋ? ನಿಮ್ಮ ನಿಷ್ಠೆ ರಾಷ್ಟ್ರ ಧ್ವಜಕ್ಕೋ , ಧಾರ್ಮಿಕ ಧ್ವಜಕ್ಕೋ? ಉತ್ತರ ನೀಡುವ ದಮ್ಮು ತಾಕತ್ತು ಇದೆಯೇ ? ಎಂದು ಕಟುವಾಗಿ ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!