Thursday, November 21, 2024

ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಸಂಘಟನೆ ಮೇಲಿನ ನಿಷೇದ ವಿಸ್ತರಿಸಿದ ಕೇಂದ್ರ ಸರ್ಕಾರ !

ಜನಪ್ರತಿನಿಧಿ ವಾರ್ತೆ ( ನವ ದೆಹಲಿ) : ಭಯೋತ್ಪಾದಕ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(ಸಿಮಿ) ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ ಆದೇಶ ಹೊರಡಿಸಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಇಂದು(ಸೋಮವಾರ) ಮಾಹಿತಿ ನೀಡಿದ್ದಾರೆ.

ಯುಎಪಿಎ ಅಡಿಯಲ್ಲಿ ಮತ್ತೆ ಐದು ವರ್ಷಗಳ ಕಾಲ ನಿಷೇಧಿತ ಸಿಮಿ ಸಂಘಟನೆಯನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ ಎಂದು ಶಾ ತಿಳಿಸಿದ್ದಾರೆ.

ಇನ್ನು, ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(ಸಿಮಿ) ಮೇಲೆ ಹೇರಲಾಗಿರುವ ನಿಷೇಧವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಈ ಬಗ್ಗೆ ತನ್ನ ಅಧಿಕೃತ ಮೈಕ್ರೋ ಬ್ಲಾಗಿಂಗ್‌ ಖಾತೆ ʼಎಕ್ಸ್‌ʼ ನಲ್ಲಿ ಕೇಂದ್ರ ಗೃಹ ಸಚಿವಾಲಯ ಪೋಸ್ಟ್‌ ಮಾಡವುವುದರ ಮೂಲಕ, ಭಾರತದ ಸಾರ್ವಭೌಮತೆ, ಭದ್ರತೆ ಹಾಗೂ ಸಮಗ್ರತೆಗೆ ಧಕ್ಕೆ ತರಲು ಭಯೋತ್ಪಾದನೆ, ಶಾಂತಿ ಹಾಗೂ ಕೋಮು ಸೌಹಾರ್ದವನ್ನು ಕದಡುವಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಹೇಳಿದೆ.

2014ರ ಫೆಬ್ರವರಿ 1ರಂದು ಸಿಮಿ ಸಂಘಟನೆಯನ್ನು ನಿಷೇಧಿಸಲಾಯಿತು. ನಂತರ ಈ ನಿಷೇಧವನ್ನು 2019ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಸಂಘಟನೆಯನ್ನು ಮತ್ತೆ ಐದು ವರ್ಷಗಳ ಕಾಲ ಯುಎಪಿಎ ಅಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!