spot_img
Friday, April 3, 2026
spot_img

ಪ. ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ಹಲ್ಲೆ, ಟಿಎಂಸಿಯ ಬೆಂಬಲಿಗರಿಂದ ಕೃತ್ಯ : ವರದಿ

ಜನಪ್ರತಿನಿಧಿ ವಾರ್ತೆ (ಕೋಲ್ಕತ್ತಾ) : ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ  ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಲು ಹೋದಾಗ ಕಾರಣದಿಂದ ಹಲ್ಲೆ ನಡೆದಿದೆ. ಟಿಎಂಸಿಯ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಮೂಲಗಳಿದಂದ ತಿಳಿದು ಬಂದಿದೆ.
 
ಅಧಿಕಾರಿಗಳು ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ಪಡಿತರ ವಿತರಣೆ ಹಗರಣದ ಸಂಬಂಧದ ತನಿಖೆಯ ಭಾಗವಾಗಿ ಶೇಖ್ ಸಾಜಹಾನ್ ನಿವಾಸದ ಮೇಲೆ ದಾಳಿ ನಡೆಸಲು ಯತ್ನಿಸಿದಾಗ ಸಂದರ್ಭದಲ್ಲಿ ಟಿಎಂಸಿ ನಾಯಕ ಶೇಖ್ ಸಾಜಹಾನ್ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

 ಪಶ್ಚಿಮ ಬಂಗಾಳದ 15 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ಈ ಪೈಕಿ ಶೇಖ್ ಸಾಜಹಾನ್ ನಿವಾಸವೂ ಒಂದಾಗಿದೆ. 

ಶೇಖ್ ನಿವಾಸಕ್ಕೆ ಬಂದ ಅಧಿಕಾರಿಗಳನ್ನು ಟಿಎಂಸಿ ನಾಯಕನ ಬೆಂಬಲಿಗರು ಘೇರಾವ್ ಮಾಡಿ ಆ ಪ್ರದೇಶವನ್ನು ತೊರೆಯುವಂತೆ ಒತ್ತಾಯಿಸಿದರು ಎಂದು ಹಲ್ಲೆಗೊಳಗಾದ ಅಧಿಕಾರಿ ಹೇಳಿದ್ದಾರೆ. ಈ ಪೈಕಿ ಓರ್ವ ಅಧಿಕಾರಿ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದೆ.

ಹಿಂದೆಂದೂ ಈ ರೀತಿಯ ದಾಳಿ ನಡೆದಿರುವ ಉದಾಹರಣೆಗಳಿಲ್ಲ. ಶೇಖ್ ಷಹಜಹಾನ್ ಕುರಿತು ನಮ್ಮ ದೆಹಲಿ ಕಚೇರಿಗೆ ವರದಿ ಕಳುಹಿಸಿದ್ದೇವೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 

ಸಜಹಾನ್ ಬಹುಕೋಟಿ ಪಡಿತರ ವಿತರಣೆ ಹಗರಣದ ಸಂಬಂಧ ಬಂಧಿತರಾಗಿರುವ ರಾಜ್ಯ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರ ಆಪ್ತ ಸಹಾಯಕ ಎಂದು ಪರಿಗಣಿಸಲಾಗಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಉತ್ತರ 24 ಪರಗಣ ಜಿಲ್ಲೆಯ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಲಿಲ್ಲ ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!