spot_img
Friday, April 3, 2026
spot_img

ಕರ್ನಾಟಕದಿಂದ ಕಾಂಗ್ರೆಸ್‌ ಅಧಿನಾಯಕಿ ರಾಜ್ಯಸಭೆಗೆ ! : ಈ ಬಾರಿ ಸೋನಿಯಾ ಲೋಕಸಭಾ ಕಣಕ್ಕಿಳಿಯುವುದು ಅನುಮಾನ !

ಜನಪ್ರತಿನಿಧಿ ವಾರ್ತೆ : ಕೇಂದ್ರ ಚುನಾವಣಾ ಆಯೋಗ(ಇಸಿಐ) ಇಂದು(ಸೋಮವಾರ) 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದ ಬೆನ್ನಿಗೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭಾ ಚುನಾವಣಾ ಕಣಕ್ಕಿಳಿಯಲಿದೆ ಎಂಬ ಸುದ್ದಿ ಈಗ ಕೇಳಿ ಬರುತ್ತಿದೆ.

ಸೋನಿಯಾ ಗಾಂಧಿ ಈ ಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳು ತೀರಾ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ಆ ಕಾರಣದಿಂದ ಕರ್ನಾಟಕದಿಂದ ಅಥವಾ ಹಿಮಾಚಲದಿಂದ ರಾಜ್ಯಸಭಾ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ವಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ಆಯ್ಕೆಯಾಗಿದ್ದಾರೆ. ಅವರ ಅವಧಿ ಏಪ್ರಿಲ್‌ ನಲ್ಲಿ ಮುಗಿಯಲಿದೆ. ವಿಧಾನಸಭೆಯ ಬಲಾಬಲದ ಆಧಾರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆ ಹೆಚ್ಚು. ಹಾಗಾಗಿ, ನಡ್ಡಾ ಅವರು ಬೇರೆ ರಾಜ್ಯದಿಂದ ಸ್ಪರ್ಧಿಸುವ ಸಂಭವ ಇದೆ ಎಂದೂ ಕೂಡ ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಬಿಜೆಪಿಯ ವರಿಷ್ಠರು ಸಲಹೆ ನೀಡಿದ್ದಾರೆ. ಅವರನ್ನು ಕೇರಳದಿಂದ ಕಣಕ್ಕೆ ಇಳಿಸಲು ವರಿಷ್ಠರು ಉತ್ಸುಕರಾಗಿದ್ದಾರೆ. ತಮ್ಮ ನಿಲುವು ತಿಳಿಸಲು ರಾಜೀವ್‌ ಅವರು ಕಾಲಾವಕಾಶ ಕೇಳಿದ್ದು, ರಾಜೀವ್‌ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ರಾಜ್ಯಸಭೆ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ಲಭಿಸಬಹುದು. ತಮ್ಮನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಮಾಡುವಂತೆ ಮಾಜಿ ಸಚಿವ ವಿ. ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಷ್ಟದ ಮೂರು ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವುದಾಗಿಯೂ ಸೋಮಣ್ಣ ಅವರು ವರಿಷ್ಠರಿಗೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!