spot_img
Wednesday, January 22, 2025
spot_img

ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಪರಿಚಯ ಪುಸ್ತಕ ‘ಹೊಂಬೆಳಕು’ ಬಿಡುಗಡೆ

ಕೋಟ : ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಪ್ರಕಾಶನ ಕೋಟ ಆಶ್ರಯದಲ್ಲಿ ತಿಂಗಳ ಪುರಸ್ಕಾರ, ಕೃತಿ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಉಪನ್ಯಾಸ ಮಾಲಿಕೆ ಸಂಚಿತಾ-2024 (ಇತಿಹಾಸದ ಪರಿಚಾಯಿಕೆ) ಕಾರ್ಯಕ್ರಮ ಜ.28ರಂದು ಜರಗಿತು.

ಕಾರ್ಯಕ್ರಮವನ್ನು ಪತ್ರಕರ್ತ ಯು.ಎಸ್ ಶೆಣೈ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದೀಪ್ ಬಸ್ರೂರು ಸಂಪಾದಕತ್ವದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸುವ ಹೊಂಬೆಳಕು ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಗ್ರಾಮೀಣ ಭಾಗದಲ್ಲೂ ಸ್ವಾತಂತ್ರ್ಯಕ್ಕಾಗಿ ಹಲವಾರು ಜನರು ಹೋರಾಟದ ಮಾಡಿದ್ದಾರೆ. ಅವರ ನೆನಪು ಶಾಶ್ವತವಾಗಿರಲು ಹೊಂಬೆಳಕು ಪುಸ್ತಕ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಸದಸ್ಯ ವಾಸು ಪೂಜಾರಿ, ಹೊಂಬೆಳಕು ಪುಸ್ತಕದ ಪ್ರಧಾನ ಸಂಪಾದಕ ಪ್ರದೀಪ್ ಬಸ್ರೂರು, , ವಿದ್ಯಾರ್ಥಿನಿ ಮನ್ವಿತಾ ಎಸ್ ಹಾಗೂ ಗಾಯಕಿ ಶರಣ್ಯ ಚಾತ್ರ ಉಪಸ್ಥಿತರಿದ್ದರು.

ಶಿಕ್ಷಕ ಸತೀಶ್ ವಡ್ಡರ್ಸೆ ಕೃತಿ ಪರಿಚಯಿಸಿದರು. ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಕೋಟ ಕಲ್ಮಾಡಿ, ಕೋಟತಟ್ಟು, ಕೋಟ ಶಾಲೆ, ದಾನಗುಂದು, ಹಂದಟ್ಟು, ಅರಮ ದೇವಸ್ಥಾನ ಅಂಗನವಾಡಿ ಪುಟಾಣಿಗಳಿಂದ ನೃತ್ಯ ವೈವಿಧ್ಯ ಜರಗಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!